ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಯೋಗದಿಂದ ಭ್ರಷ್ಟಾಚಾರ ನಿರ್ಮೂಲನೆ ಅಸಾಧ್ಯ: ಕಾಂಗ್ರೆಸ್ (Yoga | Cannot end | Corruption | Minister Bharat Singh)
ಯೋಗ ಗುರು ಬಾಬಾ ರಾಮ್‌ದೇವ್‌ ಅವರು ಭ್ರಷ್ಟಾಚಾರದ ವಿರುದ್ಧ ನಡೆಸುತ್ತಿರುವುದರ ಉಪವಾಸ ಸತ್ಯಾಗ್ರಹದ ಕುರಿತು ಕಾಂಗ್ರೆಸ್ ವಾಗ್ದಾಳಿ ಮುಂದುವರಿದಿದ್ದು, ಯೋಗದಿಂದ ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯವಿಲ್ಲ ಎಂದು ಕೇಂದ್ರದ ರಾಜ್ಯ ಖಾತೆ ಸಚಿವ ಭರತ್‌ ಸಿಂಗ್‌ ಮಂಗಳವಾರ ಹೇಳಿದ್ದಾರೆ.

ದೇಶದ ಪ್ರತಿಯೊಬ್ಬ ನಾಗರಿಕರೂ ಪ್ರಾಮಾಣಿಕವಾಗಿರಬೇಕು ಹಾಗೂ ಕರ್ತವ್ಯಕ್ಕೆ ಬದ್ಧರಾಗಿದ್ದಾಗ ಮಾತ್ರ ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಿಸಲು ಸಾಧ್ಯ ಎಂದು ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಡಬಿ ಪಟ್ಟಣದಲ್ಲಿ ಎರಡು ದಿನಗಳ ಕಾಲ ನಡೆದ ಭೀಲ್‌ ಆದಿವಾಸಿ ವಿಕಾಸ ಮೇಳದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, 'ಯೋಗಾಭ್ಯಾಸ ಹಾಗೂ ಪ್ರಾಮಾಣಿಕ ರಾಜಕಾರಣ ಇವೆರಡೂ ಒಂದೇ ಆಗಿರುವುದಿಲ್ಲ' ಎಂದು ಹೇಳಿದರು.

ಹುತಾತ್ಮ ನಾಯಕ್‌ ಭೀಲ್‌ ಅವರ ಪುಣ್ಯ ತಿಥಿಯ ಅಂಗವಾಗಿ ರಾಜಸ್ಥಾನದಲ್ಲಿ ನಡೆದ ಭೀಲ್‌ ಆದಿವಾಸಿ ವಿಕಾಸ ಮೇಳದಲ್ಲಿ ಬುಡಕಟ್ಟು ಖಾತೆ ರಾಜ್ಯ ಸಚಿವ ಮಹಾದೇವ್‌ ಸಿಂಗ್‌ ಖಂಡೇಲಾ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

ದಾಬಿ ಪಟ್ಟಣದಲ್ಲಿ ಆದಿವಾಸಿ ಬಾಲಕಿಯರ ಹಾಸ್ಟೆಲ್‌ ನಿರ್ಮಾಣಕ್ಕಾಗಿ ಒಂದು ಕೋಟಿ ರೂ. ಹಾಗೂ ಬುಂದಿ ಜಿಲ್ಲೆಯಲ್ಲಿ ಆದಿವಾಸಿ ಬಾಲಕಿಯರ ಹಾಸ್ಟೆಲ್‌ ನಿರ್ಮಾಣಕ್ಕಾಗಿ 12 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಖಂಡೇಲಾ ಘೋಷಿಸಿದರು.
ಇವನ್ನೂ ಓದಿ