ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ವರ್ಷದ ಭೀಕರ ರೈಲು ದುರಂತ; ಸತ್ತವರ ಸಂಖ್ಯೆ 63ಕ್ಕೇರಿಕೆ (Train derailed | Kalka mail | Howrah-Kalka Mail | Fatehpur accident)
ಪಶ್ಚಿಮ ಬಂಗಾಳದ ಹೌರಾದಿಂದ ದೆಹಲಿಗೆ ಹೊರಟಿದ್ದ ಕಾಲ್ಕಾ ಮೇಲ್ ರೈಲು ಉತ್ತರಪ್ರದೇಶದ ಮಾಲ್ವ ನಿಲ್ದಾಣದ ಬಳಿ ಭಾನುವಾರ ಮಧ್ಯಾಹ್ನ ಹಳಿ ತಪ್ಪಿದ ಪರಿಣಾಮ ಸಂಭವಿಸಿದ ದುರಂತದಲ್ಲಿ ಸತ್ತವರ ಸಂಖ್ಯೆ 63ಕ್ಕೆ ಏರಿಕೆಯಾಗಿದ್ದು, 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಇದು ಈ ವರ್ಷದಲ್ಲಿ ನಡೆದ ಭೀಕರ ರೈಲು ದುರಂತವಾಗಿದೆ. ರಕ್ಷಣಾ ಕಾರ್ಯಕ್ಕಾಗಿ ದುರಂತ ಸ್ಥಳಕ್ಕೆ ವಿಶೇಷ ರೈಲಗಳನ್ನು ರವಾನಿಸಲಾಗಿದೆ. ಗಾಯಗೊಂಡವರಿಗೆ ಹತ್ತಿರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

1200 ಪ್ರಯಾಣಿಕರು ಸಂಚರಿಸುತ್ತಿದ್ದ ರೈಲಿನ 13 ಬೋಗಿಗಳು ಹಳಿ ತಪ್ಪಿದ ಪರಿಣಾಮ ಭಾರಿ ದುರಂತ ಸಂಭವಿಸಿತ್ತು. ಚಾಲಕ ಎಮರ್‌ಜನ್ಸಿ ಬ್ರೇಕ್ ಹಾಕಿರುವುದು ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖಾ ವರದಿಗಳಿಂದ ತಿಳಿದು ಬಂದಿದೆ. ಅಪಘಾತ ವೇಳೆ ರೈಲು 108 ಕೀ.ಮೀ. ವೇಗದಲ್ಲಿ ಚಲಿಸುತ್ತಿತ್ತು ಎನ್ನಲಾಗುತ್ತಿದೆ. ಇದೀಗ ಹೌರಾ ಹಾಗೂ ದೆಹಲಿ ನಿಲ್ದಾಣದಲ್ಲಿ ಸಹಾಯವಾಣಿ ತೆರೆಯಲಾಗಿದೆ.

ಭೀಕರ ರೈಲು ದುರುಂತಕ್ಕೆ ಪ್ರಧಾನಿ ಸೇರಿದಂತೆ ಗಣ್ಯರು ಇದೀಗಲೇ ಸಂತಾಪ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಐದು ಲಕ್ಷ, ಗಂಭೀರ ಗಾಯಗೊಂಡವರಿಗೆ ಒಂದು ಲಕ್ಷ ಹಾಗೂ ಸಣ್ಣಪುಟ್ಟ ಗಾಯಗೊಂಡವರಿಗೆ 25 ಸಾವಿರ ರೂಪಾಯಿಗಳ ಪರಿಹಾರವನ್ನು ರೈಲ್ವೇ ಖಾತೆ ರಾಜ್ಯ ಸಚಿವ ಮುಕುಲ್ ರಾಯ್ ಘೋಷಿಸಿದ್ದಾರೆ.

ದುರಂತಕ್ಕೆ ಸಂತಾಪ ವ್ಯಕ್ತಪಡಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ರಾಜ್ಯ ಸರಕಾರದ ವತಿಯಿಂದ ಸಹ ಸತ್ತವರ ಕುಟಂಬಕ್ಕೆ ಒಂದು ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ 25 ಸಾವಿರ ಪರಿಹಾರ ಘೋಷಿಸಿದ್ದಾರೆ.

ವೆಬ್‌ದುನಿಯಾ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!
ಇವನ್ನೂ ಓದಿ