ಪ್ರಧಾನಮಂತ್ರಿ ಅವಧಿ ಮುಕ್ತಾಯದ ನಂತರ ಲೋಕಪಾಲ ವ್ಯಾಪ್ತಿಗೆ ತರಬಹುದಾಗಿದೆ. ಆದರೆ, ಪ್ರಧಾನಿಯಾಗಿದ್ದಾಗ ಲೋಕಪಾಲ ವ್ಯಾಪ್ತಿಗೆ ಸೇರಿಸುವುದು ತರವಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಲೋಕಪಾಲ ಮಸೂದೆಯ ಮೂಲ ಉದ್ದೇಶ ಹಾಗೂ ಮಸೂದೆ ಬಗ್ಗೆ ಚರ್ಚೆಯಾಗುತ್ತಿರುವುದು ಒಳ್ಳೆಯ ಬೆಳವಣಿಗೆ. ಆದರೆ, ಮಸೂದೆ ಮಂಡನೆಯಾದ ನಂತರ ಹೊಸ ಸಮಸ್ಯೆಗಳಿಗೆ ನಾಂದಿ ಹಾಡಬಾರದು ಎನ್ನುವುದು ನಮ್ಮ ಬಯಕೆಯಾಗಿದೆ ಎಂದರು.
ದೇಶದಲ್ಲಿ ಹೆಮ್ಮರವಾಗಿ ಬೆಳೆಯುತ್ತಿರುವ ಭ್ರಷ್ಟಾಚಾರವನ್ನು ತಡೆಯಲು ಉತ್ತಮ ರಾಜಕಾರಣ ಹಾಗೂ ಅತ್ಯುತ್ತಮ ಯುವ ರಾಜಕಾರಣಿಗಳನ್ನು ಮುಂದೆ ತರಬೇಕಾಗಿದೆ ಎಂದು ಹೇಳಿದ್ದಾರೆ.
ಸಚ್ಚಾರಿತ್ರ್ಯವಂತರಿಗೆ ಮಾತ್ರ ಕಾಂಗ್ರೆಸ್ ಸ್ಥಾನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ರಾಹುಲ್, ಕಾಂಗ್ರೆಸ್ ಪದಾಧಿಕಾರಿಗಳು ಪ್ರಾಮಾಣಿಕರಾಗಿರಬೇಕು .ಯಾವುದೇ ರೀತಿಯ ಅಪರಾಧ ಹಿನ್ನೆಲೆಯಲ್ಲಿ ತೊಡಗಿರುವುದು ಕಂಡುಬಂದಲ್ಲಿ ಅಂತಹ ಕಾರ್ಯಕರ್ತರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ರಾಹುಲ್ ಗಾಂಧಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.