ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಬಿಜೆಪಿಗೆ ಈಗ ದಿಲ್ಲಿ ಲೋಕಾಯುಕ್ತ, ಶುಂಗ್ಲು ವರದಿಯೇ ಗುರಾಣಿ (Lokayukta | Karnataka | Illegal Mining | BJP | Delhi Lokayukta)
ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಆರೋಪಗಳಿರುವ ಅಕ್ರಮ ಗಣಿಗಾರಿಕೆ ಕುರಿತಾದ ಲೋಕಾಯುಕ್ತ ವರದಿ ಸೋರಿಕೆಯಾಗಿ ಬಹಿರಂಗಗೊಂಡಿರುವ ಬಗ್ಗೆ ತಣ್ಣನೆಯ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಈ ಬಗ್ಗೆ ಈಗಲೇ ಪ್ರತಿಕ್ರಿಯಿಸುವುದು ತೀರಾ ಅಪ್ರಬುದ್ಧ ಎಂದಿದೆಯಲ್ಲದೆ, ಕಾಂಗ್ರೆಸ್ ಪಕ್ಷವು ಮೊದಲು ಶುಂಗ್ಲು ಸಮಿತಿ ವರದಿ ಹಾಗೂ ದೆಹಲಿ ಲೋಕಾಯುಕ್ತರ ವರದಿಯ ಮೇಲೆ ಕ್ರಮ ಕೈಗೊಳ್ಳಲಿ ಎಂದು ಸವಾಲು ಹಾಕಿದೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಲಕ್ಷಾಂತರ ಕೋಟಿ ರೂಪಾಯಿ ಹಗರಣದ ಕುರಿತು ತನಿಖೆ ನಡೆಸಿದ ಶುಂಗ್ಲು ಸಮಿತಿ ವರದಿಯಲ್ಲಿ ದೆಹಲಿಯ ಕಾಂಗ್ರೆಸ್ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಸರಕಾರದ ಮೇಲೆ ಆರೋಪವಿದೆ. ಅಲ್ಲದೆ, ಆಕೆಯ ಮಂತ್ರಿ ಮಂಡಲದಲ್ಲಿರುವ ರಾಜ್ ಕುಮಾರ್ ಚೌಹಾಣ್ ಮೇಲೆ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತರು ರಾಷ್ಟ್ರಪತಿಗೇ ವರದಿ ಸಲ್ಲಿಸಿದ್ದಾರೆ. ಈ ಎರಡೂ ಕೇಸುಗಳಲ್ಲಿ ಇಷ್ಟು ಸಮಯವಾದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಕಾಂಗ್ರೆಸ್ ಮೊದಲು ಇದಕ್ಕೆ ಪ್ರತಿಕ್ರಿಯಿಸಲಿ ಎಂದು ಬಿಜೆಪಿ ವಕ್ತಾರ ಪ್ರಕಾಶ್ ಜಾವಡೇಕರ್ ಅವರು ಗುರುವಾರ ಹೇಳಿದರು.

ಯಾವುದೇ ಪ್ರತಿಕ್ರಿಯೆ ನೀಡುವ ಮೊದಲು ಈ ವರದಿಯನ್ನು ಅಧಿಕೃತವಾಗಿ ಬಹಿರಂಗಗೊಳಿಸಲು ಪಕ್ಷವು ಕಾಯುತ್ತಿದೆ ಎಂದು ಅವರು ಹೇಳಿದರು.

ಇದೇ ವೇಳೆ, ಸುದ್ದಿಗಾರರೊಂದಿಗೆ ಮಾತನಾಡಿದ ದೆಹಲಿಯಲ್ಲಿ ಕರ್ನಾಟಕ ಸರಕಾರದ ವಿಶೇಷ ಪ್ರತಿನಿಧಿ ಧನಂಜಯ ಕುಮಾರ್, ಲೋಕಾಯುಕ್ತ ವರದಿ ಸೋರಿಕೆಯಾಗಿರುವುದರಿಂದ ವರದಿಯ ತೀಕ್ಷ್ಣತೆಯನ್ನು ಕುಗ್ಗಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಲೋಕಾಯುಕ್ತರು ರಾಜ್ಯದ ಅಕ್ರಮ ಗಣಿಗಾರಿಕೆ ಕುರಿತು ತಯಾರಿಸಿದ ವರದಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೇಂದ್ರದ ಹಾಲಿ ಸಚಿವ ಕೆ.ಎಚ್.ಮುನಿಯಪ್ಪ, ಕರ್ನಾಟಕದ ಸಚಿವರಾದ ವಿ.ಸೋಮಣ್ಣ, ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ, ಬಿ.ಶ್ರೀರಾಮುಲು ಹಾಗೂ ಕಾಂಗ್ರೆಸ್ ಸಂಸದ ಅನಿಲ್ ಲಾಡ್ ಅವರು ದೋಷಿಗಳು ಎಂಬ ಉಲ್ಲೇಖವಿದೆ.

ವೆಬ್‌ದುನಿಯಾ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!

ಇವನ್ನೂ ಓದಿ
ಇದನ್ನು ಸಹ ಶೋಧಿಸು: ಲೋಕಾಯುಕ್ತ, ಗಣಿಗಾರಿಕೆ ವರದಿ, ಕರ್ನಾಟಕ, ಅಕ್ರಮ ಗಣಿಗಾರಿಕೆ, ರೆಡ್ಡಿ ಸಹೋದರರು, ಬಿಜೆಪಿ, ಸಿಡಬ್ಲ್ಯುಜಿ, ದೆಹಲಿ ಲೋಕಾಯುಕ್ತ, ಯಡಿಯೂರಪ್ಪ