ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಯಡಿಯೂರಪ್ಪ ಕೆಳಗಿಳಿಸದಿದ್ದಲ್ಲಿ ಬಿಜೆಪಿಗೆ ಹಾನಿ: ಕುಮಾರ್ (Yeddiyurappa | BJP | L.K | Advani | Shantkumar)
PTI
ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಈಗ ಅಧಿಕಾರದಿಂದ ಕೆಳಗಿಳಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ರಾಷ್ಟ್ರಮಟ್ಟದಲ್ಲಿ ಭಾರಿ ತೊಂದರೆ ಅನುಭವಿಸಬೇಕಾಗುತ್ತದೆ. ದೇಶದಲ್ಲಿ ಬಿಜೆಪಿ ವರ್ಚಸ್ಸು ಕಡಿಮೆಯಾಗಲು ಯಡಿಯೂರಪ್ಪ ನೇರ ಕಾರಣವಾಗಿದ್ದಾರೆ ಎಂದು ಬಿಜೆಪಿ ಉಪಾಧ್ಯಕ್ಷ ರಾಜ್ಯದ ಮಾಜಿ ಉಸ್ತುವಾರಿ ಶಾಂತಕುಮಾರ್, ಪಕ್ಷದ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿಯವರಿಗೆ ಪತ್ರ ಬರೆದಿದ್ದಾರೆ.

ಯಡಿಯೂರಪ್ಪ ಮುಂದುವರಿಕೆಯಿಂದ ಕೇವಲ ಕರ್ನಾಟಕವಲ್ಲದೇ, ದೇಶಾದ್ಯಂತ ಬಿಜೆಪಿಯ ಹೆಸರು ಕೀರ್ತಿ ಹಾಳಾಗುತ್ತಿದೆ. ರಾಷ್ಟ್ರಮಟ್ಟದಲ್ಲಿ ಪಕ್ಷ ಭ್ರಷ್ಟಾಚಾರದ ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ಹಿನ್ನೆಡೆಯಾಗುತ್ತದೆ ಎಂದು ಕಿಡಿಕಾರಿದ್ದಾರೆ.

ಲೋಕಾಯುಕ್ತರು ನೇರವಾಗಿ ಯಡಿಯೂರಪ್ಪ ಅವರ ಹೆಸರನ್ನು ಅಕ್ರಮ ಗಣಿ ಪ್ರಕರಣದಲ್ಲಿ ಸೇರಿಸಿದ್ದಾರೆ. ಹೀಗಾಗಿ ಅವರು ಅಧಿಕಾರದಲ್ಲಿ ಮುಂದುವರಿಯುವಂತಿಲ್ಲ. ಪಕ್ಷದ ಹಿತದೃಷ್ಟಿಯಿಂದ ಈ ಕೂಡಲೇ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಯಡಿಯೂರಪ್ಪ ವಿರುದ್ಧ ಕ್ರಮ ಕೈಗೊಳ್ಳದೇ ಪಕ್ಷ ರಾಷ್ಟ್ರಮಟ್ಟದಲ್ಲಿ ಯುಪಿಎ ಸರಕಾರದ ವಿರುದ್ಧ ಸಮರ ಸಾರಲು ಸಾಧ್ಯವೆ..? ಈಗ ನಮ್ಮ ಸ್ಥಿತಿ ಅಪಾಯ ಮಟ್ಟದಲ್ಲಿದೆ. ನಾವೀಗ ಇದಕ್ಕೆ ಪರಿಹಾರ ಕಂಡುಕೊಳ್ಳಲೇಬೇಕು ಎಂದು ಒತ್ತಾಯಿಸಿದ್ದಾರೆ.

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸುತ್ತಿರುವ ಬಿಜೆಪಿ ನಿಲುವು ಕಾಂಗ್ರೆಸ್ ಪಕ್ಷಕ್ಕೆ ಹಬ್ಬವಾಗಿದೆ.ಯುಪಿಎ ಸರಕಾರ ಹಲವು ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿದೆ. ಯಪಿಎ ಸರಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು ಸೂಕ್ತ ಎಂದು ಎಲ್.ಕೆ.ಅಡ್ವಾಣಿಯವರಿಗೆ ಬರೆದ ಪತ್ರದಲ್ಲಿ ಬಿಜೆಪಿ ಉಪಾಧ್ಯಕ್ಷ ಶಾಂತಕುಮಾರ್ ತಿಳಿಸಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಯಡಿಯೂರಪ್ಪ, ಬಿಜೆಪಿ, ಎಲ್ಕೆಅಡ್ವಾಣಿ, ಶಾಂತಕುಮಾರ