ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಓಟಿಗಾಗಿ-ನೋಟು ಪ್ರಕರಣ: ಅಮರ್ ಬೆಂಬಲಕ್ಕೆಮುಲಾಯಂ (Samajwadi party | Mulayam Singh Yadav | Congress | Cash-for-vote scam |amar singh | Ahmed Patel)
PTI
ಓಟಿಗಾಗಿ ನೋಟು ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ಅವರ ವಿಚಾರಣೆ ನಡೆಸುತ್ತಿರುವ ದೆಹಲಿ ಪೊಲೀಸ್‌ ಕ್ರಮ ಸೂಕ್ತವಲ್ಲ. ಅಮರ್‌ಸಿಂಗ್‌ ಅವರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಬೆಂಬಲ ನೀಡುವುದಾಗಿ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಘೋಷಿಸಿದ್ದಾರೆ.

ಏತನ್ಮಧ್ಯೆ, ಕಳೆದ ವರ್ಷ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಉಚ್ಚಾಟಿಸಲಾಗಿದ್ದ ಅಮರ್ ಸಿಂಗ್ ಅವರನ್ನು ಮತ್ತೆ ಪಕ್ಷಕ್ಕೆ ಸೇರ್ಪಡೆಗೊಳಿಸುವುದನ್ನು ಮುಲಾಯಂ ತಳ್ಳಿಹಾಕಿದ್ದಾರೆ.

ಅಮರ್ ಸಿಂಗ್‌ಗೆ ಅನ್ಯಾಯ ಮಾಡಲಾಗುತ್ತಿದ್ದು, ಅವರ ವಿರುದ್ಧ ಸಂಚು ರೂಪಿಸಲಾಗಿದೆ. ರೇವತಿ ರಮನ್ ಸಿಂಗ್ ಮತ್ತು ಅಮರ್ ಸಿಂಗ್ ವಿಶ್ವಾಸಮತದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೆರವು ನೀಡಿದ್ದಾರೆ. ಇದೀಗ ಅವರ ವಿಚಾರಣೆ ನಡೆಸುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿ ನಾವು ನೆರವಾಗಿದ್ದೇವೆ. ನಾವು ಸರಕಾರದಲ್ಲಿ ಖಾತೆಗಳನ್ನು ಪಡೆಯಲಿಲ್ಲ. ಅಮರ್ ಸಿಂಗ್ ಅಥವಾ ರೇವತಿ ಸಿಂಗ್ ಸಚಿವರಾಗಿದ್ದಾರೆಯೇ? ಎಂದು ಯುಪಿಎ ಸರಕಾರದ ಕಾರ್ಯವೈಖರಿ ವಿರುದ್ಧ ಮುಲಾಯಂ ಕಿಡಿಕಾರಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಓಟಿಗಾಗಿನೋಟು, ಅಮರ್ ಸಿಂಗ್, ಮುಲಾಯಂ ಸಿಂಗ್ ಯಾದವ್