ಬಿಜೆಪಿ ಸೇರಿದಂತೆ ವಿರೋಧ ಪಕ್ಷಗಳ 2ಜಿ ತರಂಗ ಗುಚ್ಚ ಹಾಗೂ ಇತರ ಹಗರಣಗಳ ಬಗ್ಗೆ ಸರಕಾರ ಸದನದಲ್ಲಿ ಸೂಕ್ತ ಉತ್ತರ ನೀಡಲಿದೆ. ಆದರೆ, ಕೆಲ ಉಗ್ರರ ದಾಳಿ ಪ್ರಕರಣಗಳ ತನಿಖಾ ವೇಗವನ್ನು ಸರಕಾರ ಹೆಚ್ಚಿಸುವ ಅಗತ್ಯವಿದೆ ಎಂದು ಕೇಂದ್ರ ಗೃಹಸಚಿವ ಪಿ.ಚಿದಂಬರಂ ಹೇಳಿದ್ದಾರೆ.
ಸಂಸತ್ತಿನಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಡೆಯಲಿರುವ ಚರ್ಚೆಯಲ್ಲಿ ವಿರೋಧ ಪಕ್ಷಗಳ ಆರೋಪಗಳಿಗೆ ಉತ್ತರಿಸಲಾಗುವುದು.. ಬಿಜೆಪಿ ಆರೋಪಗಳಿಗೆ ಕಾಂಗ್ರೆಸ್ ಪಕ್ಷದ ವಕ್ತಾರರು ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪ್ರಧಾನಮಂತ್ರಿ ಮನಮೋಹನ್ ಸಿಂಗ್, ವಿರೋಧ ಪಕ್ಷಗಳು ಕೂಡಾ ಭ್ರಷ್ಟಾಚಾರದಲ್ಲಿ ಭಾಗಿಯಾಗಿವೆ ಎನ್ನುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ಪ್ರಧಾನಮಂತ್ರಿ ಹೇಳಿಕೆಗೆ ಉತ್ತರ ನೀಡಲು ಬಯಸುವುದಿಲ್ಲ, ಪ್ರಧಾನಿ ಮತ್ತು ವಿರೋಧಪಕ್ಷದ ನಾಯಕರಿಗೆ ಆರೋಪ ಪ್ರತ್ಯಾರೋಪ ಮಾಡುವ ಅವಕಾಶಗಳಿವೆ ಎಂದು ಗೃಹ ಸಚಿವ ಪಿ.ಚಿದಂಬರಂ ತಿಳಿಸಿದ್ದಾರೆ.