ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಇದೀಗ, ಸಂಸತ್ತಿನಲ್ಲಿ ಬಿಜೆಪಿಗೆ ಚಿದಂಬರಂ ಹೊಸ ಟಾರ್ಗೆಟ್ (BJP | Chidambaram | Parliament | Fresh target | Resignation)
PTI
ದರ ಏರಿಕೆ, ಭ್ರಷ್ಟಾಚಾರ ವಿರೋಧಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದನ್ನು ಖಂಡಿಸಿದ ಬಿಜೆಪಿ, ಗೃಹಸಚಿವ ಪಿ.ಚಿದಂಬರಂ ರಾಜೀನಾಮೆ ನೀಡುವಂತೆ ಒತ್ತಾಯಿಸಿದೆ.

ಪಕ್ಷದ ಕಾರ್ಯಕರ್ತರ ವಿರುದ್ಧ ಪೊಲೀಸರು ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿದ ಬಿಜೆಪಿ ಸಂಸದರು ರಾಜ್ಯಸಭೆಯಲ್ಲಿ ಗದ್ದಲವೆಬ್ಬಿಸಿದ್ದರಿಂದ ಪ್ರಶ್ನೋತ್ತರ ಕಲಾಪವನ್ನು ರದ್ದುಗೊಳಿಸಿ ಸದನವನ್ನು ನಾಳೆಗೆ ಮುಂದೂಡಲಾಯಿತು.
ಲೋಕಸಭೆಯಲ್ಲಿ ಕೂಡಾ ಕೇಂದ್ರ ಗೃಹ ಸಚಿವ ರಾಜೀನಾಮೆ ನೀಡುವಂತೆ ಬಿಜೆಪಿ ಸದಸ್ಯರು ಪ್ರತಿಭಟಿಸಿ ರಾಜೀನಾಮೆ ನೀಡುವಂತೆ ಘೋಷಣೆಗಳನ್ನು ಕೂಗಿದ್ದರಿಂದ ಕಲಾಪವನ್ನು ಒಂದು ದಿನದ ಅವಧಿಗೆ ಮುಂದೂಡಲಾಯಿತು.

ಕಾಮನ್‌ವೆಲ್ತ್ ಗೇಮ್ಸ್ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ ಎಂದು ಸಿಎಜಿ ವರದಿ ಬಹಿರಂಗವಾದ ಹಿನ್ನೆಲೆಯಲ್ಲಿ ಮುಖ್ಯ.ಮಂತ್ರಿ ಶೀಲಾ ದೀಕ್ಷಿತ್ ರಾಜೀನಾಮೆ ನೀಡುವಂತೆ ಬಿಜೆಪಿ ಕಾರ್ಯಕರ್ತರು ಜಂತರ್ ಮಂತರ್‌ ಬಳಿ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

ದರ ಏರಿಕೆ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರ ವಿರುದ್ಧ ಪೊಲೀಸರ ಬಲಪ್ರಯೋಗ ಸೂಕ್ತವಲ್ಲ. ಆದ್ದರಿಂದ, ಗೃಹ ಸಚಿವ ಪಿ.ಚಿದಂಬರಂ ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮುಖಂಡ ಗೋಪಿನಾಥ್ ಮುಂಡೆ ಕಿಡಿಕಾರಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಬಿಜೆಪಿ, ಚಿದಂಬರಂ, ಸಂಸತ್ತು, ಟಾರ್ಗೆಟ್, ರಾಜೀನಾಮೆ