ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಬಂಧನ: ಸುಪ್ರೀಂಕೋರ್ಟ್ ಮೊರೆ ಹೋದ ಅಣ್ಣಾ ಹಜಾರೆ ತಂಡ (Anna Hazare team | Supreme Court | Prashant Bhushan | Government)
ಬಂಧನ: ಸುಪ್ರೀಂಕೋರ್ಟ್ ಮೊರೆ ಹೋದ ಅಣ್ಣಾ ಹಜಾರೆ ತಂಡ
ನವದೆಹಲಿ, ಮಂಗಳವಾರ, 16 ಆಗಸ್ಟ್ 2011( 10:35 IST )
PTI
ದೆಹಲಿ ಪೊಲೀಸರು ಹಜಾರೆ ಬೆಂಬಲಿಗರನ್ನು ಬಂಧಿಸುತ್ತಿರುವ ಕ್ರಮವನ್ನು ವಿರೋಧಿಸಿ, ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು ಎಂದು ಹಜಾರೆ ತಂಡದ ಸದಸ್ಯ ಸುಪ್ರೀಂಕೋರ್ಟ್‌ನ ಖ್ಯಾತ ನ್ಯಾಯವಾದಿ ಪ್ರಶಾಂತ್ ಭೂಷಣ್ ಹೇಳಿದ್ದಾರೆ.
ಪೊಲೀಸರು ಯಾವುದೇ ಕಾರಣಗಳನ್ನು ನೀಡದೆ ಬಂಧಿಸುತ್ತಿರುವುದು ಪ್ರಜಾಪ್ರಭುತ್ವಕ್ಕೆ ಹಾಗೂ ಸಂವಿಧಾನ ವಿರೋಧಿಯಾಗಿದೆ. ಕೇಂದ್ರ ಸರಕಾರದ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.
ಕೇಂದ್ರ ಸರಕಾರದ ಕ್ರಮದಿಂದ ದೇಶಧ ನಾಗರಿಕರ ಮೂಲಭೂತ ಹಕ್ಕುಗಳನ್ನು ಹತ್ತಿಕ್ಕಿದಂತಾಗಿದೆ.ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಯುಪಿಎ ಸರಕಾರ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಕಿಡಿಕಾರಿದ್ದಾರೆ.
ಲೋಕಪಾಲ ಮಸೂದೆ ಜಾರಿಗಾಗಿ ಸರಕಾರದ ವಿರುದ್ಧ ಶಾಂತಿಯುತವಾಗಿ ಹೋರಾಟ ನಡೆಸಲು ಮನವಿ ಮಾಡುವುದಾಗಿ ಹೇಳಿದ ಅವರು. ಸರಕಾರದ ವಿರುದ್ಧ ಹೋರಾಡುವ ಸಮಯ ಇದೀಗ ಬಂದಿದೆ ಎಂದು ತಿಳಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್, ಕಿರಣ್ ಬೇಡಿ, ಶಾಂತಿ ಭೂಷಣ್ ಮತ್ತು ಪ್ರಶಾಂತ್ ಭೂಷಣ್ ಅವರನ್ನು ದೆಹಲಿ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.