ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಅಣ್ಣಾ ಬಂಧನ ಸಮರ್ಥಿಸಿಕೊಂಡ ಪ್ರಧಾನಿ ಸಿಂಗ್ (Anna Hazare | Lokpal Bill | PM Manmohan Singh)
PTI
ವಿರೋಧ ಪಕ್ಷಗಳ ಒತ್ತಡಕ್ಕೆ ಮಣಿದ ಸಂಸತ್ತಿನಲ್ಲಿ ಹೇಳಿಕೆ ನೀಡಿದ ಪ್ರಧಾನಿ ಮನಮೋಹನ್ ಸಿಂಗ್, ದೆಹಲಿ ಪೊಲೀಸರ ಷರತ್ತುಗಳನ್ನು ಉಲ್ಲಂಘಿಸಿದ್ದರಿಂದ ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆಯವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಲಾಗಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಸಮರ್ಥಿಸಿಕೊಂಡಿದ್ದಾರೆ.

ಪ್ರಧಾನಿ ಮನಮೋಹನ್ ಸಿಂಗ್ ಮಾತನಾಡಿ, ದೆಹಲಿ ಪೊಲೀಸರು ಅಣ್ಣಾ ಹಜಾರೆ ಮತ್ತು ಅವರ ಬೆಂಬಲಿಗರನ್ನು ಬಂಧಿಸಿರುವುದಕ್ಕೆ ನನಗೆ ನೋವಿದೆ. ಜನಲೋಕಪಾಲ ಮಸೂದೆ ಜಾರಿಗಾಗಿ ಆಮರಣ ನಿರಶನ ಆರಂಭಿಸುವ ಮುನ್ನ ಅಣ್ಣಾ ಹಜಾರೆ ಮತ್ತು ಅವರ ಬೆಂಬಲಿಗರು ದೆಹಲಿ ಪೊಲೀಸರ ಷರತ್ತುಗಳನ್ನು ಉಲ್ಲಂಘಿಸಿದ್ದರಿಂದ, ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಅಣ್ಣಾ ಹಜಾರೆಯವರನ್ನು ಬಂಧಿಸುವುದು ಅನಿವಾರ್ಯವಾಗಿತ್ತು ಎಂದು ತಿಳಿಸಿದ್ದಾರೆ.

ಅಣ್ಣಾ ಹಜಾರೆಯವರೊಂದಿಗೆ ಸರಕಾರ ಮುಖಾಮುಖಿಯಾಗಲು ಬಯಸುವುದಿಲ್ಲ. ಆದರೆ, ಸರಕಾರದ ಕಾನೂನುಗಳನ್ನು ರೂಪಿಸುವ ಸಂಸತ್ತಿನಲ್ಲಿ ಜನತೆಯಿಂದ ಆಯ್ಕೆಯಾದ ಸಂಸದರು ಕಾರ್ಯನಿರ್ವಹಿಸಲು ಟೀಂ ಅಣ್ಣಾ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಲೋಕಸಭೆಯಲ್ಲಿ ಪ್ರಧಾನಿಯವರ ಹೇಳಿಕೆಯಿಂದ ತೃಪ್ತರಾಗದ ವಿರೋಧಪಕ್ಷಗಳು ಸರಕಾರದ ವಿರುದ್ಧ ಹಲವು ಬಾರಿ ಘೋಷಣೆಗಳನ್ನು ಮೊಳಗಿಸಿದರು. ಸಭಾಪತಿ ಮೀರಾ ಕುಮಾರ್, ವಿರೋಧಪಕ್ಷಗಳಿಗೆ ಘೋಷಣೆಗಳನ್ನು ನಿಲ್ಲಿಸುವಂತೆ ಹಲವು ಬಾರಿ ಮನವಿ ಮಾಡಬೇಕಾಯಿತು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಅಣ್ಣಾ ಹಜಾರೆ, ಲೋಕಪಾಲ ಮಸೂದೆ, ಪ್ರಧಾನಿ ಮನಮೋಹನ್ ಸಿಂಗ್