ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಜನಲೋಕಪಾಲ ಮಂಡಿಸಿದ್ರೆ ನಿರಶನ ಅಂತ್ಯ: ಕೇಜ್ರಿವಾಲ್ (Lokpal Bill | UPA | Anna Hazare | Congress)
PTI
ನಾಳೆ ಜನಲೋಕಪಾಲ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಿದಲ್ಲಿ, ಅಣ್ಣಾ ಹಜಾರೆ ನಿರಶನವನ್ನು ಅಂತ್ಯಗೊಳಿಸಲಿದ್ದಾರೆ. ಒಂದು ವೇಳೆ, ಹಜಾರೆಯವರ ಆರೋಗ್ಯದಲ್ಲಿ ಏರುಪೇರಾದಲ್ಲಿ ಅದಕ್ಕೆ ಸರಕಾರವೇ ನೇರ ಹೊಣೆಯಾಗುತ್ತದೆ ಎಂದು ಅಣ್ಣಾ ತಂಡದ ಸದಸ್ಯ ಅರವಿಂದ್ ಕೇಜ್ರಿವಾಲ್ ಎಚ್ಚರಿಸಿದ್ದಾರೆ.

ಅಣ್ಣಾ ಹಜಾರೆಯವರನ್ನು ರಾಮಲೀಲಾ ಮೈದಾನದಿಂದ ಒತ್ತಾಯಪೂರ್ವಕವಾಗಿ ಸ್ಥಳಾಂತರಿಸುವುದಿಲ್ಲ ಎಂದು ಪೊಲೀಸರು ಆಶ್ವಾಸನೆ ನೀಡಿದ್ದಾರೆ. ಆದ್ದರಿಂದ, ಯಾರು ಆತಂಕಪಡುವ ಅಗತ್ಯವಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಗಾಂಧಿವಾದಿ ಅಣ್ಣಾ ಹಜಾರೆಯವರ ಅನಿರ್ಧಿಷ್ಠಾವಧಿ ನಿರಶನ ಒಂಬತ್ತನೇ ದಿನಕ್ಕೆ ಕಾಲಿರಿಸಿದಂತೆ, ಇಂದು ನಡೆದ ಸರ್ವಪಕ್ಷಗಳ ಸಭೆಯಲ್ಲಿ ಹಜಾರೆ ನಿರಶನವನ್ನು ಅಂತ್ಯಗೊಳಿಸಬೇಕು ಎನ್ನುವ ಜಂಟಿ ನಿರ್ಣಯವೊಂದನ್ನು ಹೊರಡಿಸಲಾಗಿದೆ.

ಲೋಕಪಾಲ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ವಪಕ್ಷಗಳ ಸಭೆಯಲ್ಲಿ ಒಮ್ಮತ ಮೂಡದ ಕಾರಣ ಗೊಂದಲದಲ್ಲಿಯೇ ಅಂತ್ಯಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ರೇಸ್ ಕೋರ್ಸ್ ರಸ್ತೆಯಲ್ಲಿ ನಿವಾಸದಲ್ಲಿ ಸಭೆ ಸೇರಿದ ಸರ್ವಪಕ್ಷಗಳ ಸಭೆಯಲ್ಲಿ, ಅಣ್ಣಾ ತಂಡದ ಸದಸ್ಯರು ಸಿದ್ಧಪಡಿಸಿದ ಜನಲೋಕಪಾಲ ಮಸೂದೆಯ ಪ್ರತಿಗಳನ್ನು ಸಂಸದರಿಗೆ ಸಭೆಯಲ್ಲಿ ವಿತರಿಸಲಾಯಿತು.

PTI
ಸರಕಾರಿ ಲೋಕಪಾಲ ಮಸೂದೆಯನ್ನು ಹಿಂಪಡೆಯಬೇಕು.ಸಂಸದೀಯ ಸ್ಥಾಯಿ ಸಮಿತಿಗೆ ಶಿಫಾರಸ್ಸು ಮಾಡುವ ಬದಲಿಗೆ ನೇರವಾಗಿ ನಾಲ್ಕು ದಿನಗಳೊಳಗಾಗಿ ಸಂಸತ್ತಿನಲ್ಲಿ ಮಂಡಿಸಬೇಕು ಎನ್ನುವ ಕಗ್ಗಂಟಾದ ಮೂರು ಷರತ್ತುಗಳ ಬಗ್ಗೆ ಪ್ರಧಾನಿ ಮನಮೋಹನ್ ಸಿಂಗ್ ಸಭೆಯಲ್ಲಿ ಪ್ರಸ್ತಾಪಿಸಿದರು

ಕೇಂದ್ರ ಸರಕಾರ ಲಿಖಿತ ಭರವಸೆ ನೀಡಿದಲ್ಲಿ ಮಾತ್ರ ನಿರಶನವನ್ನು ಅಂತ್ಯಗೊಳಿಸುವುದಾಗಿ ಅಣ್ಣಾ ತಂಡ ಹೇಳಿಕೆ ನೀಡಿದೆ ಎಂದು ಪ್ರಧಾನಿ, ಸರ್ವಪಕ್ಷ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ.

ಸಂಸದೀಯ ಸ್ಥಾಯಿ ಸಮಿತಿ ಎಲ್ಲಾ ಅಂಶಗಳನ್ನು ಪರಿಗಣಿಸಿ, ಸಶಕ್ತ ಲೋಕಪಾಲ ಮಸೂದೆ ಜಾರಿಗೆ ತರಬೇಕಾಗಿದೆ. ಇತ್ತೀಚೆಗೆ ನಡೆದ ಕೆಲ ಬದಲಾವಣೆಗಳು ಸಂಸದೀಯ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವಂತಹದಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಗಾಂಧಿವಾದಿ ಅಣ್ಣಾ ಹಜಾರೆ ನಿರಶನ ಹಾಗೂ ಅವರ ಅನಾರೋಗ್ಯ ನಮ್ಮೆಲ್ಲರ ಕಳವಳಕ್ಕೆ ಕಾರಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಸರ್ವಪಕ್ಷಗಳ ಸಭೆಯಲ್ಲಿ ಕೇಂದ್ರ ಸಚಿವರಾದ ಪ್ರಣಬ್ ಮುಖರ್ಜಿ, ಪಿ.ಚಿದಂಬರಂ, ಎಕೆ.ಆಂಟನಿ, ಸಲ್ಮಾನ್ ಖುರ್ಷಿದ್, ಪವನ್ ಕುಮಾರ್ ಬನ್ಸಾಲ್ ಮತ್ತು ಕಪಿಲ್ ಸಿಬಲ್ ಸೇರಿದಂತೆ ವಿರೋಧ ಪಕ್ಷದ ನಾಯಕರಾದ ಎಲ್.ಕೆ.ಆಡ್ವಾಣಿ, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಮತ್ತು ಜೆಡಿ(ಯು)ಅಧ್ಯಕ್ಷ ಶರದ್ ಯಾದವ್ ಉಪಸ್ಥಿತರಿದ್ದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಲೋಕಪಾಲ ಮಸೂದೆ, ಅಣ್ಣಾ ಹಜಾರೆ, ಕಾಂಗ್ರೆಸ್, ಸರ್ವಪಕ್ಷ ಸಭೆ, ಹಜಾರೆ ನಿರಶನ, ಲೋಕಪಾಲ ಮಸೂದೆ