ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಪ್ರಧಾನಿಯನ್ನು ಕೋರ್ಟ್‌ಗೆಳೆದವನಿಗೆ 1 ಲಕ್ಷ ರೂ. ದಂಡ (Manmohan Singh | Delhi High Court | Penalty | Cash-for-vote | Government | Trust vote | Latest Politics News in Kannada | Latest India News)
PTI
ಕಳೆದ 2008ರಲ್ಲಿ ವಿಶ್ವಾಸಮತದ ಸಂದರ್ಭದಲ್ಲಿ ಸಂಸತ್ತಿನಲ್ಲಿ ಪ್ರತಿಧ್ವನಿಸಿದ ಓಟಿಗಾಗಿ-ನೋಟು ಪ್ರಕರಣದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರನ್ನು ನ್ಯಾಯಾಲಯ ತಿರಸ್ಕರಿಸಿದ್ದಲ್ಲದೇ ಫಿರ್ಯಾದುದಾರರಿಗೆ 1 ಲಕ್ಷ ರೂಪಾಯಿ ದಂಡವನ್ನು ವಿಧಿಸಿ ಆದೇಶ ಹೊರಡಿಸಿದೆ.

2008ರ ಜುಲೈ 22 ರಂದು ವಿಶ್ವಾಸಮತ ಸಂದರ್ಭದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಸರಕಾರದ ಪರ ಮತ ಚಲಾಯಿಸುವಂತೆ ತಮಗೆ ಹಣ ನೀಡಲಾಗಿದೆ ಎಂದು ಆರೋಪಿಸಿ, ಮೂವರು ಬಿಜೆಪಿ ಸದಸ್ಯರು ಸಂಸತ್ತಿನಲ್ಲಿ ಕಂತೆ ಕಂತೆ ಹಣವನ್ನು ತೋರಿಸಿ ಕೋಲಾಹಲ ಸೃಷ್ಟಿಸಿದ್ದರು.

ಫಿರ್ಯಾದುದಾರರ ದೂರನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಅಜಿತ್ ಭಾರಿಹೋಕ್ ನೇತೃತ್ವದ ನ್ಯಾಯಪೀಠ, ಫಿರ್ಯಾದಿದಾರರ ದೂರು ಕೇವಲ ಅಗ್ಗದ ಪ್ರಚಾರ ಪಡೆಯುವ ಉದ್ದೇಶವಾಗಿದೆ. ನ್ಯಾಯಾಲಯದ ಪ್ರಕ್ರಿಯೆಗೆ ಕೆಟ್ಟ ಹೆಸರು ತರುವ ಗುರಿಯನ್ನು ಹೊಂದಲಾಗಿದೆ ಎಂದು ಅಭಿಪ್ರಾಯಪಟ್ಟರು.

ನ್ಯಾಯಾಲಯದಲ್ಲಿ ದೂರು ದಾಖಲಿಸಿದ ಸಂತೋಷ್ ಕುಮಾರ್ ಸುಮನ್ ಅವರಿಗೆ 1 ಲಕ್ಷ ರೂಪಾಯಿ ದಂಡವನ್ನು ಹೇರಲಾಗಿದ್ದು, ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಅವರ ಬಳಿ ಹಣವನ್ನು ಠೇವಣಿ ಮಾಡುವಂತೆ ಆದೇಶಿಸಿದ್ದಾರೆ. ನಂತರ ಪ್ರಧಾನಮಂತ್ರಿ ಪರಿಹಾರ ನಿಧಿಗೆ ಕಳುಹಿಸಲಾಗುವುದು ಎಂದು ನ್ಯಾಯಾಮೂರ್ತಿಗಳು ಆದೇಶ ನೀಡಿದ್ದಾರೆ.

ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ನೇತೃತ್ವದ ಸರಕಾರವನ್ನು ಉಳಿಸಲು ಸಂಸದರಿಗೆ ಹಣವನ್ನು ಕಾನೂನುಬಾಹಿರವಾಗಿ ನೀಡಲಾಗಿತ್ತು. ಸಂಸದರಿಗೆ ಹಣದ ಅಮಿಷವೊಡ್ಡಿರುವುದರಿಂದ ಪ್ರಧಾನಮಂತ್ರಿಯ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಫಿರ್ಯಾದುದಾರರು ದೂರು ದಾಖಲಿಸಿದ್ದರು.

ಸುಮನ್, ಕಳೆದ ಮಾರ್ಚ್ 28 ರಂದು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಮುಖ್ಯಸ್ಥರಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ನ್ಯಾಯಾಲಯದ ಮುಂದೆ ಬಂದಾಗ ದೂರನ್ನು ನ್ಯಾಯಾಲಯ ತಿರಸ್ಕರಿಸಿತ್ತು.

ನ್ಯಾಯಾಲಯ ತಮ್ಮ ದೂರು ತಿರಸ್ಕರಿಸಿದ್ದರಿಂದ ಸುಮನ್, ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಪತ್ರ ಬರೆದಿದ್ದು, ಪ್ರಧಾನಮಂತ್ರಿಯ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಮನಮೋಹನ್ ಸಿಂಗ್, ದೆಹಲಿ ಹೈಕೋರ್ಟ್, ದಂಡ, ಓಟಿಗಾಗಿನೋಟು, ಸರಕಾರ, ವಿಶ್ವಾಸಮತ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ