ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಅಫ್ಜಲ್, ಕಸಬ್‌ರನ್ನು ಬಹಿರಂಗವಾಗಿ ನೇಣಿಗೇರಿಸಿ: ಅಣ್ಣಾ ಹಜಾರೆ (Anna Hazare, Afzal Guru,Ajmal Kasab, India News, Latest India News in Kannada)
anna hazare
WD
ಭಯೋತ್ಪಾದನೆ ಕೃತ್ಯಗಳ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಉಗ್ರರಾದ ಅಫ್ಜಲ್‌ ಗುರು ಮತ್ತು ಅಜ್ಮಲ್‌ ಕಸಬ್‌ರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸುವ ಮೂಲಕ ಉಗ್ರರಿಗೆ ಪಾಠ ಕಲಿಸಬೇಕು ಎಂದು ಗಾಂಧಿವಾದಿ ಅಣ್ಣಾ ಹಜಾರೆ ಹೇಳಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಹೇಯ ಕೃತ್ಯವೆಸಗಿದ ದುಷ್ಕರ್ಮಿಗಳಿಗೆ ವಿಧಿಸಲಾಗಿರುವ ಗಲ್ಲು ಶಿಕ್ಷೆಯನ್ನು ಜಾರಿಗೊಳಿಸುವ ನಿಟ್ಟಿಲ್ಲಿ ಸರಕಾರವು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಹಜಾರೆ ತಮ್ಮೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.

ಸಂಸತ್‌ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿ ಸುಪ್ರೀಂ ಕೋರ್ಟ್‌‌ನಿಂದ ಗಲ್ಲು ಶಿಕ್ಷೆಗೆ ಒಳಗಾಗಿರುವ ಅಫ್ಜಲ್‌ ಗುರು ಸಲ್ಲಿಸಿದ ಕ್ಷಮಾದಾನ ಅರ್ಜಿಯನ್ನು ಗೃಹ ಸಚಿವರು ಇತ್ತೀಚೆಗೆ ರಾಷ್ಟ್ರಪತಿಗೆ ರವಾನಿಸಿದ್ದರು.

ಮುಂಬೈ ಮೇಲೆ ನಡೆದ 26/11ರ ದಾಳಿ ಸಂದರ್ಭದಲ್ಲಿ ಮುಂಬೈ ಪೊಲೀಸರಿಂದ ಬಂಧಿತನಾಗಿರುವ ಏಕೈಕ ಉಗ್ರ ಅಜ್ಮಲ್‌ ಕಸಬ್‌ ತನಗೆ ನ್ಯಾಯಾಲಯ ವಿಧಿಸಿರುವ ಮರಣದಂಡನೆ ಶಿಕ್ಷೆಯನ್ನು ಮರುಪರಿಶೀಲಿಸುವಂತೆ ಸಲ್ಲಿಸಿರುವ ಅರ್ಜಿ ಸುಪ್ರೀಂ ಕೋರ್ಟ್‌ ಮುಂದಿದೆ. ಮುಂಬೈ ದಾಳಿಗೆ ಪಾಕಿಸ್ತಾನದ ಲಷ್ಕರ್‌ ಎ ತೊಯ್ಬಾ ಉಗ್ರಗಾಮಿ ಸಂಘಟನೆ ಕಳುಹಿಸಿದ್ದ ಕಸಬ್‌ನ ಎಲ್ಲ ಸಹಚರರು ಸೇನೆ ನಡೆಸಿದ ಪ್ರತಿ ದಾಳಿಯಲ್ಲಿ ಮೃತಪಟ್ಟಿದ್ದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಅಣ್ಣಾ ಹಜಾರೆ, ಅಫ್ಜಲ್ ಗುರು, ಅಜ್ಮಲ್ ಕಸಬ್, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ