ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ನರೇಂದ್ರ ಮೋದಿ ನಿರಶನಕ್ಕೆ ಬಾದಲ್, ಜಯಲಲಿತಾ ಬೆಂಬಲ (Punjab CM badal | Narendra modi fast | Jayalalitha| BJP | Supreme Court)
PTI
ಗುಜರಾತ್ ರಾಜ್ಯದ ಏಕತೆ ಮತ್ತು ಶಾಂತಿ ಸಂದೇಶವನ್ನು ಸಾರಲು ಮುಖ್ಯಮಂತ್ರಿ ನರೇಂದ್ರ ಮೋದಿ ನಾಳೆಯಿಂದ ಮೂರು ದಿನಗಳವರೆಗೆ ಆರಂಭಿಸಲಿರುವ ನಿರಶನಕ್ಕೆ, ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್, ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಬೆಂಬಲ ಸೂಚಿಸಿದ್ದಾರೆ.

ರಾಜ್ಯದ ಶಾಂತಿ, ಏಕತೆ ಮತ್ತು ಸಾಮರಸ್ಯವನ್ನು ಹರಡಲು ಆರಂಭಿಸುವ ನಿರಶನದಲ್ಲಿ ಪಾಲ್ಗೊಳ್ಳಲು ನಾಳೆ ಬೆಳಿಗ್ಗೆ ತೆರಳುತ್ತಿರುವುದಾಗಿ ಬಾದಲ್ ತಿಳಿಸಿದ್ದಾರೆ.

ಬಿಜೆಪಿ ಹಿರಿಯ ಮುಖಂಡರಾದ ಎಲ್‌.ಕೆಆಡ್ವಾಣಿ ಮತ್ತು ಅರುಣ್ ಜೇಟ್ಲಿ ಸೇರಿದಂತೆ ಪಕ್ಷದ ಅನೇಕ ಗಣ್ಯರು ಮುಖ್ಯಮಂತ್ರಿ ಮೋದಿಗೆ ಸಾಥ್ ನೀಡಲಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಕೂಡಾ ತಮ್ಮ ಇಬ್ಬರು ಪ್ರತಿನಿಧಿಗಳನ್ನು ಕಳುಹಿಸಿಕೊಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗುಜರಾತ್ ಗಲಭೆ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ ನೀಡಿದ ವರದಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಚಾರಣೆ ನಡೆಸಲಿದೆ. ಸುಪ್ರೀಂಕೋರ್ಟ್ ಮೇಲ್ವಿಚಾರಣೆ ನಡೆಸುವುದಿಲ್ಲ ಎಂದು ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನರೇಂದ್ರ ಮೋದಿ ಮೂರು ದಿನಗಳ ನಿರಶನ ಹಮ್ಮಿಕೊಂಡಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಪಂಜಾಬ್, ಮುಖ್ಯಮಂತ್ರಿ, ಪ್ರಕಾಶ್ ಸಿಂಗ್ ಬಾದಲ್, ಜಯಲಲಿತಾ, ಬಿಜೆಪಿ, ನಿರಶನ, ಸುಪ್ರೀಂಕೋರ್ಟ್