ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » 2ಜಿ: ರಾಜೀನಾಮೆಗೆ ಮುಂದಾಗಿದ್ದರಂತೆ ಪಿ.ಚಿದಂಬರಂ ! (2G controversy | P Chidambaram | Manmohan Singh | Pranab mukharjee)
PTI
2ಜಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ವಿತ್ತಸಚಿವ ಪ್ರಣಬ್ ಮುಖರ್ಜಿ ಪ್ರಧಾನಿ ಕಾರ್ಯಾಲಯಕ್ಕೆ ಬರೆದ ಪತ್ರದಿಂದಾಗಿ ಇದೀಗ ಹೊಸತೊಂದು ಬೆಳವಣಿಗೆಗೆ ಕಾರಣವಾಗಿದೆ. ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಅವರಿಗೆ ದೂರವಾಣಿ ಕರೆ ಮಾಡಿದಾಗ, ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಚ್ಚೆ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ಮನಮೋಹನ್ ಸಿಂಗ್ ಮಾತನಾಡಿ, ಚಿದಂಬರಂ ವಿತ್ತಸಚಿವರಾಗಿ ಹಾಗೂ ಗೃಹ ಸಚಿವರಾಗಿ ಉತ್ತಮ ಕಾರ್ಯನಿರ್ವಹಿಸಿದ್ದಾರೆ. ಅವರ ಮೇಲೆ ತುಂಬಾ ವಿಶ್ವಾಸವಿದೆ. ಹಿರಿಯ ಸಚಿವರ ಮಧ್ಯೆ ಭಿನ್ನಾಭಿಪ್ರಾಯಗಳಿಲ್ಲ. ವಿರೋಧ ಪಕ್ಷಗಳ ಒತ್ತಡಕ್ಕೆ ಮಣಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

2ಜಿ ಪ್ರಕರಣದ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿರುವುದರಿಂದ ಹೇಳಿಕೆ ನೀಡುವುದು ಸೂಕ್ತವಲ್ಲ. ಚಿದಂಬರಂ ವಿತ್ತಸಚಿವರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಇದೀಗ ಗೃಹ ಸಚಿವರಾಗಿ ಕೂಡಾ ಉತ್ತಮ ಸೇವೆ ಸಲ್ಲಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಇದಕ್ಕಿಂತ ಮೊದಲು, ಅಂದಿನ ವಿತ್ತಸಚಿವ ಚಿದಂಬರಂ ತಮ್ಮ ನಿಲುವಿಗೆ ಬದ್ಧರಾಗಿದ್ದಲ್ಲಿ 2ಜಿ ಹಗರಣವನ್ನು ತಡೆಯಬಹುದಿತ್ತು ಎಂದು ಪ್ರಣಬ್ ಮುಖರ್ಜಿ ಪ್ರಧಾನಿ ಕಾರ್ಯಾಲಯಕ್ಕೆ ಬರೆದ ಪತ್ರ ರಾಜಕೀಯ ವಲಯದಲ್ಲಿ ಕೋಲಾಹಲ ಮೂಡಿಸಿದ್ದು, ವಿಪಕ್ಷಗಳಿಗೆ ಸರಕಾರದ ವಿರುದ್ಧ ಬ್ರಹ್ಮಾಸ್ತ್ರ ದೊರೆತಂತಾಗಿದೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: 2ಜಿ ವಿವಾದ, ಪಿಚಿದಂಬರಂ, ಮನಮೋಹನ್ ಸಿಂಗ್, ಪ್ರಣಬ್ ಮುಖರ್ಜಿ, ಬಿಜೆಪಿ, ಸುಪ್ರೀಂಕೋರ್ಟ್