ರಾಜ್ಯಾದ್ಯಂತ ಸೋಮವಾರ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಮತ್ತು ರಾಜೀವ್ಗಾಂಧಿ ಅವರ ಜನ್ಮದಿನಾಚರಣೆ ಕಾರ್ಯಕ್ರಮಗಳು ನಡೆದಿವೆ.
ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಶ್ರಮಿಸಿದ ದೇವರಾಜ ಅರಸು ಅವರ 92ನೇ ಜನ್ಮದಿನದಂದು ಅವರ ಗುಣಗಾನ ಮಾಡಲಾಯಿತು.
ದೇವರಾಜ ಅರಸು ಅವರ ಪ್ರತಿಮೆಗೆ ಮಾಲರ್ಪಣೆ ಮಾಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಏಳಿಗೆ ಗಾಗಿ ಶ್ರಮಿಸಿದ್ದಾರೆ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಸತಿನಿಲಯಗಳಿಗೆ ದೇವರಾಜ ಅರಸು ಅವರ ಹೆಸರಿಡಲಾಗುವುದು ಎಂದು ತಿಳಿಸಿದರು.
ರಾಜ್ಯದ ವಿವಿಧೆಡೆ ರಾಜೀವ್ಗಾಂಧಿ ಅವರ 63ನೇ ಜನ್ಮದಿನಾಚರಣೆ ನಡೆಯಿತು.
ಶಿವಮೊಗ್ಗದಲ್ಲಿ ಶಾಲಾ ಮಕ್ಕಳು ರ್ಯಾಲಿ ನಡೆಸಿದರು. ಎಲ್ಲ ಜಿಲ್ಲಾ ಕಾಂಗ್ರೆಸ್ ಕಚೇರಿಗಳಲ್ಲಿ ರಾಜೀವ್ಗಾಂಧಿ ಜನ್ಮದಿನಾಚರಣೆ ಕಾರ್ಯಕ್ರಮಗಳು ನಡೆಯಿತು.
|