ಗುಲ್ಬರ್ಗಾ ಜಿಲ್ಲೆಯಲ್ಲಿ ಮಂಗಳವಾರದಿಂದ ಮೂರು ದಿನಗಳ ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸುರಪುರ ಹಾಗೂ ಕನ್ನಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ.
ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳು ಹಾಗೂ ಖಾಸಗಿ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿಯಲಾಗುತ್ತಿದೆ. ಮುಖ್ಯಮಂತ್ರಿಗಳು ಭೇಟಿ ನೀಡಲಿರುವ ಪಟ್ಟಣ ಹಾಗೂ ಗ್ರಾಮಗಳಲ್ಲಿ ರಸ್ತೆ ನಿರ್ಮಾಣ ಹಾಗೂ ಡಾಂಬರೀಕರಣ ಕಾಮಗಾರಿ ಭರದಿಂದ ಸಾಗಿದೆ.
|