ರಾಜ್ಯದಲ್ಲಿ ಜೆಡಿಎಸ್ ಜೊತೆ ಕೈಜೋಡಿಸಿ ಸರ್ಕಾರ ರಚನೆ ಮಾಡುವ ಸಂಬಂಧ ಕಾಂಗ್ರೆಸ್ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಪುನರುಚ್ಚರಿಸಿದ್ದಾರೆ.
ಈ ವಿಷಯದಲ್ಲಿ ಸೋನಿಯಾಗಾಂಧಿ ಅವರ ನಿರ್ಧಾರವೇ ಅಂತಿಮ ಎಂದು ರಾಜೀವ್ಗಾಂಧಿ ಜನ್ಮದಿನಾಚರಣೆ ಸಂದರ್ಭದಲ್ಲಿ ಹೇಳಿದ್ದಾರೆ. ತಾವು ಕಾಂಗ್ರೆಸ್ಸಿನ ಶಿಸ್ತಿನ ಸಿಪಾಯಿ ಯಾಗಿದ್ದು ಪಕ್ಷದ ನಿರ್ಧಾರಕ್ಕೆ ತಲೆ ಬಾಗುವುದಾಗಿ ತಿಳಿಸಿದ್ದಾರೆ.
|