ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಯಡಿಯೂರಪ್ಪ ಮೌನಕ್ಕೆ ಶರಣು
ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಬರುವ ಅಕ್ಟೋಬರ್ 3ರ ಗಡುವು ಮುಗಿಯುವವರೆಗೆ ಯಾವುದೇ ಪ್ರತಿಕ್ರಿಯೆ ನೀಡದೆ ಮೌನವಾಗಿರಲು ಬಿಜೆಪಿ ನಿರ್ಧರಿಸಿದೆ ಎಂದು ಉಪ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಮಿತ್ರ ಪಕ್ಷ ಜೆಡಿಎಸ್‌ ಮುಖಂಡರ ಪ್ರಚೋದನಕಾರಿ ನಡವಳಿಕೆ ಹಾಗೂ ಹೇಳಿಕೆಗಳನ್ನು ಶಾಂತಚಿತ್ತವಾಗಿಯೇ ಗಮನಿಸಲು ತೀರ್ಮಾನಿಸಿದೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ,ಮುಖ್ಯಮಂತ್ರಿಗಳ ಜತೆ ಉತ್ತಮ ಹೊಂದಾಣಿಕೆಯಿದ್ದು,ಸಂಪೂರ್ಣ ವಿಶ್ವಾಸ ಇದೆ.ಹೇಳಿಕೆಗೆ ಪ್ರತಿ ಹೇಳಿಕೆ ನೀಡುವ ಮೂಲಕ ಪರಿಸ್ಥಿತಿಯನ್ನು ಹದಗೆಡಿಸುವ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಇತರೆ ಮುಖಂಡರಿಗೂ ಅಧಿಕಾರ ಹಸ್ತಾಂತರದ ಕುರಿತು ಪ್ರತಿಕ್ರಿಯೆ ನೀಡದಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಗುಲ್ಬರ್ಗದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು,ಜೆಡಿಎಸ್ ಮತ್ತೆ ಬಿಜೆಪಿಯೊಂದಿಗೆ ಮುಂದುವರಿದರೆ,ಕೋಮುವಾದಿ ಎಂಬ ಹಣೆಪಟ್ಟಿ ಕಟ್ಟಿಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದರು ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು,ಈ ಹಿನ್ನೆಲೆಯಲ್ಲಿ ಯಡಿಯೂರಪ್ಪನವರು ಅದಕ್ಕೆ ಪ್ರತಿಕ್ರಿಯೆಯಾಗಿ ಏನನ್ನೂ ಹೇಳುವುದಿಲ್ಲ ಎಂಬುದಾಗಿ ತಿಳಿಸಿದ್ದರು.
ಮತ್ತಷ್ಟು
ನೂತನ ಜಿಲ್ಲೆಯಾಗಿ ಚಿಕ್ಕಬಳ್ಳಾಪುರ
ರೋಗಿ ಸಾವು: ವೈದ್ಯರ ವಿರುದ್ಧ ಪ್ರತಿಭಟನೆ
ಗಣಿ ರಾಜಕೀಯ:ಸಚಿವ ರಾಮುಲು ಟೀಕೆ
ಚೀನಾ ದೇಶಕ್ಕೆ ಶಾಸಕರ ತಂಡ
ಬಿಜೆಪಿ ಮೈತ್ರಿ,ಜೆಡಿಎಸ್ ತತ್ವಗಳಿಗೆ ಧಕ್ಕೆ-ಕುಮಾರ ಸ್ವಾಮಿ
ಬೆಂಗಳೂರಿನಲ್ಲಿ ವಿಜ್ಞಾನ ನಗರ