ಕನ್ನಡಕ್ಕೆ ಶಾಸ್ತ್ತ್ರೀಯ ಭಾಷೆ ಸ್ಥಾನ ಮಾನ ಪಡೆಯುವಲ್ಲಿ ಇಚ್ಛಾಶಕ್ತಿಯ ಕೊರತೆಯಿದೆ ಎಂದು 74ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಪ್ರೊ.ಎಲ್.ಎಸ್.ಶೇಷಗಿರಿ ರಾವ್ ಹೇಳಿದ್ದಾರೆ.
ಸ್ವಾಭಿಮಾನ ಕರ್ನಾಟಕ ವೇದಿಕೆ ನಗರದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಇತರ ರಾಜ್ಯಗಳು ಸುಲಭವಾಗಿ ಶಾಸ್ತ್ತ್ರೀಯ ಭಾಷೆಯ ಸ್ಥಾನಮಾನವನ್ನು ಪಡೆದುಕೊಳ್ಳಲು ಶಕ್ತವಾಗುತ್ತಿವೆ. ಆದರೆ ಕನ್ನಡಕ್ಕೇಕೆ ಅದು ಸಾಧ್ಯವಾಗುತ್ರತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಕೇಂದ್ರದಲ್ಲಿ ರಾಜ್ಯದ ಯಾವುದೇ ಸಚಿವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನ ಮಾನ ಸಿಗುತ್ತಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು ಇಂಗ್ಲಿಷ್ ಭಾಷೆ ಬಗ್ಗೆ ನಮಗೆ ಗೌರವವಿದೆ. ಹಾಗೆಂದು ಕನ್ನಡವನ್ನು ಮರೆಯಬಾರದು ಎಂದರು.
ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳ ಶ್ವೇತಪತ್ರ ಹೊರಡಿಸಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದರು.
|