ರಾಜ್ಯದ ಗಡಿಭಾಗದ ಬೆಳಗಾವಿ ನಗರದಲ್ಲಿ ಸುವರ್ಣ ವಿಧಾನಸೌಧ ನಿರ್ಮಾಣ ಉತ್ತರ ಕರ್ನಾಟಕ ಅಭಿವೃದ್ದಿಗೆ ನಾಂದಿಯಾಗಲಿದೆ ಎಂದು ಆ ಭಾಗದ ಜನರು ಭಾವಿಸಿದ್ದಾರೆ. ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿ ಎಂದು ಘೋಷಣೆಮಾಡುವ ಮೂಲಕ ಸರ್ಕಾರ ಐತಿಹಾಸಿಕ ನಿರ್ಣಯ ಕೈಗೊಂಡಿದೆ.
ಬೆಳಗಾವಿಯಲ್ಲಿ ಇಂಥ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಅಲ್ಲಿರುವ ಮರಾಠಿ ಭಾಷಿಕರಿಗೆ ಯಾವ ಅಂಜಿಕೆಯೂ ಬೇಡ, ಈ ವಿಷಯದಲ್ಲಿ ಯಾರೂ ಗೊಂದಲ ಸೃಷ್ಟಿಸಲು ಮುಂದಾಗಬಾರದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬೆಳಗಾವಿಯಲ್ಲಿ ಒಂದೇ ದಿನ 1,175 ಕೋಟಿ ರೂ. ಮೊತ್ತದ ಕಾಮಗಾರಿಗೆ ಚಾಲನೆ ನೀಡಿರುವುದು ಜನರಿಗೆ ಸಂತಸ ತಂದಿದೆ.
|