ಭಾನುವಾರವಷ್ಟೇ ಸುವರ್ಣ ವಿಧಾನಸೌಧ ನಿರ್ಮಾಣಕ್ಕೆ ಶಂಕುಸ್ಥಾಪನೆಯ ಶುಭಾರಂಭ ಕಂಡ ಬೆಳಗಾವಿಯಲ್ಲಿ ನವೆಂಬರ್‌ನಲ್ಲಿ ಚಳಿಗಾಲದ ಅಧಿವೇಶನವನ್ನು ನಡೆಸಲು ಸರ್ಕಾರ ನಿರ್ಧರಿಸಿದೆ.
ಬೆಳಗಾವಿಯಲ್ಲಿ ಕಳೆದ ವರ್ಷ ವಿಧಾನಮಂಡಲ ಅಧಿವೇಶನ ನಡೆಸಿ ಇತಿಹಾಸ ಸೃಷ್ಟಿಸಿದ ಸಮ್ಮಿಶ್ರ ಸರ್ಕಾರ ಮತ್ತೊಮ್ಮೆ ಅಧಿವೇಶನ ನಡೆಸಲಿದೆ. ಈ ವಿಷಯವನ್ನು ವಿಧಾನಸಭಾಧ್ಯಕ್ಷ ಕೃಷ್ಣ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸೆಪ್ಟೆಂಬರ್‌ನಲ್ಲಿ ವಿಧಾನಮಂಡಲದ ವಿಶೇಷ ಅಧಿವೇಶನ ನಡೆಯಲಿದೆ ಎಂದು ತಿಳಿಸಿದ್ದಾರೆ. ಸರ್ಕಾರದ ಕ್ರಮಗಳಿಂದ ಗಡಿಭಾಗದ ಕನ್ನಡಿಗರಿಗೆ ಅತೀವ ಸಂತೊಷವಾಗಲಿದೆ ಎಂದು ಅವರು ಹೇಳಿದ್ದಾರೆ.
|