ದಶಕಗಳಿಂದ ಸಮಸ್ಯೆಯಾಗಿ ಕಾಡುತ್ತಿರುವ ಶಿರಾಢಿಘಾಟಿಗೆ ಕೊನೆಗೂ ಮೋಕ್ಷ ಕಾಣುವ ಎಲ್ಲಾ ಲಕ್ಷಣಗಳೂ ಕಂಡು ಬರುತ್ತಿವೆ. ರಸ್ತೆ ದುರಸ್ತಿಗೆ ಸಂಬಂಧಿಸಿ ದಕ ಜಿಲ್ಲಾ ಪಂಚಾಯತ್ ನಲ್ಲಿ ಈಗಾಗಲೇ ಚರ್ಚೆ ನಡೆದಿದ್ದು, ಈ ತಿಂಗಳು 30ರ ಬಳಿಕ ರಸ್ತೆ ದುರಸ್ತಿ ಕಾಮಗಾರಿ ನಡೆಸುವಂತೆ ಆದೇಶಿಸಿದ್ದಾಗಿ ಸಚಿವ ನಾಗರಾಜ ಶೇಟ್ಟಿ ಹೇಳಿದ್ದಾರೆ.
ಶಿರಾಡಿ ಘಾಟಿಯಲ್ಲಿ ಒಟ್ಟು 17 ತಿರುವುಗಳಿದ್ದು ಇದರಲ್ಲಿ 13 ತಿರುವುಗಳು ಕಠಿಣ ಸ್ವರೂಪದ್ದಾಗಿವೆ. ಈ ಹಿನ್ನೆಲೆಯಲ್ಲಿ ಕಾಮಗಾರಿ ನಡೆಯುವ ವೇಳೆ ವಾಹನ ಸಂಚಾರ ಸ್ಥಗಿತಗೊಳಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ.
ಶೀಘ್ರದಲ್ಲೇ ಮಂಗಳೂರು -ಬೆಂಗಳೂರು ರೈಲು ಆರಂಭವಾಗಲಿದೆ. ಸೆಪ್ಟೆಂಬರ್ ತಿಂಗಳ ಒಳಗೆ ರೈಲು ಸಂಚಾರ ಆರಂಭಿಸುವುದಾಗಿ ರೈಲ್ವೇ ಇಲಾಖೆ ಪ್ರಕಟಿಸಿದ್ದು ಈ ಹಿನ್ನೆಲೆಯಲ್ಲಿ ಮಂಗಳೂರು ಬೆಂಗಳೂರು ಪ್ರಯಾಣಿಕರಿಗೆ ಯಾವುದೇ ರೀತಿಯಲ್ಲಿ ಸಮಸ್ಯೆಯಾಗದು ಎಂದು ಹೇಳಿದರು.
ಕಾಮಗಾರಿಯಲ್ಲಿ ವಿಳಂಬ ನೀತಿ ಮಾಡದಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಇನ್ನೆರಡು ದಿನಗಳಲ್ಲಿ ಪ್ರಾಥಮಿಕ ದುರಸ್ತಿ ಕಾರ್ಯ ಆರಂಭಿಸಲಾಗುವುದು ಎಂದು ಪ್ರಕಟಿಸಿದ್ದಾರೆ.
|