ರಾಜ್ಯದ 207 ನಗರ ಸ್ಥಳೀಯ ಸಂಸ್ಥೆಗಳಿಗೆ ಸೆಪ್ಟೆಂಬರ್ ಅಂತ್ಯದೊಳಗೆ ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗ ಭರದ ಸಿದ್ಧತೆ ಆರಂಭಿಸಿದೆ. ಚುನಾವಣೆ ದಿನಾಂಕ ಸೇರಿದಂತೆ ಎಲ್ಲಾ ವಿಷಯಗಳನ್ನು ಚರ್ಚಿಸಲು ಗುರುವಾರ ಉನ್ನತ ಮಟ್ಟದ ಸಭೆ ನಡೆಯಲಿದೆ.
ನಗರ ಸ್ಥಳೀಯ ಸಂಸ್ಥೆಗಳ ಹೊಸ ಮತದಾರರ ಪಟ್ಟಿ ಕಳುಹಿಸಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಸೆಪ್ಟೆಂಬರ್ 7 ರೊಳಗೆ ಆಯೋಗದ ಕೈ ಸೇರಲಿದೆ.
ಹೊಸ ಮತದಾರರ ಪಟ್ಟಿ ಲಭ್ಯವಾಗದಿದ್ದರೆ ಹಳೆಯ ಮತದಾರರರ ಪಟ್ಟಿ ಆಧರಿಸಿ ಚುನಾವಣೆ ನಡೆಸಲಾಗುವುದೆಂದು ರಾಷ್ಟ್ತ್ರ ಚುನಾವಣೆ ಆಯೋಗದ ಆಯುಕ್ತ ಎಂ.ಆರ್ ಹೆಗಡೆ ತಿಳಿಸಿದ್ದಾರೆ.
ಮೈಸೂರು, ಮಂಗಳೂರು ಸೇರಿದಂತೆ ಎಲ್ಲಾ ನಗರಗಳ ಸ್ಥಳೀಯ ಸಂಸ್ಥೆಗಳಿಗೆ ಒಂದೇ ದಿನ ಚುನಾವಣೆ ನಡೆಸಿ ಸೆಪ್ಟೆಂಬರ್ ಅಂತ್ಯದೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಆಯೋಗ ನಿರ್ಧರಿಸಿದೆ.
|