ರಾಷ್ಟ್ರೀಯ ನವನಿರ್ಮಾಣ ವೇದಿಕೆಯು ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆಯವರ 81ನೇ ಜನ್ಮ ದಿನವನ್ನು ಆಚರಿಸಿತು.
ನಗರದ ಗಾಂಧಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಹೆಗಡೆಯವರ ಪತ್ನಿ ಶಕುಂತಲಾ ಹೆಗಡೆ, ರಾಜ್ಯ ಯೋಜನಾ ಆಯೋಗದ ಮಾಜಿ ಅಧ್ಯಕ್ಷ ಡಾ.ಎ.ರವೀಂದ್ರ ಆಗಮಿಸಿದ್ದರು. ಮಾಜಿ ಸಂಸದ ಕೃಷ್ಣ ಅಯ್ಯರ್ ಅಧ್ಯಕ್ಷತೆ ವಹಿಸಿದ್ದರು.
ಹೆಗಡೆ ಕನಸು ನನಸು : ಹೆಗಡೆಯವರು ಹಸಿರು ಕನಸು ಹೊಂದಿದ್ದರು. ಸರ್ವರಿಗೂ ಆರೋಗ್ಯದ ಬಗ್ಗೆ ಯೋಜನೆಗಳನ್ನು ಜಾರಿಗೊಳಿಸಿದ್ದರು.
ಈ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಸಸಿಗಳನ್ನು ನೆಡುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸಂಯುಕ್ತ ಜನತಾದಳ ಕಾರ್ಯಕ್ರಮ ಆಯೋಜಿಸಿತ್ತು.
|