ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಬಿಎಂಐಸಿ ಗುತ್ತಿಗೆ ರದ್ದು : ಸಚಿವ ಸಂಪುಟ ನಿರ್ಧಾರ
ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ತ್ರಕ್ಚರ್ ಕಾರಿಡಾರ್ ಎಂಟರ್ಪ್ರೈಜಸ್ (ಬಿಎಂಐಸಿ) ಯೋಜೆನೆಯ ಸಂಬಂಧ ನೈಸ್ ಸಂಸ್ಥೆಯೊಂದಿಗೆ ರಾಜ್ಯ ಸರ್ಕಾರ ಮಾಡಿಕೊಂಡಿದ್ದ ಒಪ್ಪಂದವನ್ನು ರದ್ದು ಪಡಿಸಲು ಗುರುವಾರ ನಡೆದ ಸಚಿವ ಸಂಪುಟ ನಿರ್ಧರಿಸಿದೆ.

ರಾಜ್ಯ ಸರ್ಕಾರ ಹಾಗೂ ನೈಸ್ ನಡುವಣ ಈ ಸಂಬಂಧದ ವಿವಾದ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಒಪ್ಪಂದ ರದ್ದು ಮಾಡಲು ಸಚಿವ ಸಂಪುಟ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಆದರೆ ನೈಸ್ ಕಂಪೆನಿಯಿಂದ ಒಪ್ಪಂದವನ್ನು ರದ್ದು ಗೊಳಿಸಿ ಅಮೆರಿಕದ ಕಂಪೆನಿಯೊಂದಕ್ಕೆ ಗುತ್ತಿಗೆ ನೀಡಲು ನ್ಯಾಯಾಲಯದಿಂದ ಅನುಮತಿ ಕೋರಲು ಸಚಿವ ಸಂಪುಟ ನಿರ್ಧರಿಸಿದೆ.

ಎಸ್.ಎಂ. ಕೃಷ್ಣ ಸರ್ಕಾರ ಅಧಿಕಾರಾವಧಿಯಲ್ಲಿ ಬಿಎಂಐಸಿ ಯೋಜನೆಗೆ ತ್ರಿಪಕ್ಷೀಯ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಪ್ಪಂದದಲ್ಲಿ ಅಡಗಿರುವ ಒಂದು ಅಂಶ ವಿವಾದದ ಕೇಂದ್ರ ಬಿಂದವಾಯಿತು.

ಅದೇನೆಂದರೆ ಯೋಜನೆಗಾಗಿ ಸರ್ಕಾರದಿಂದ ಪಡೆದ ಭೂಮಿಯನ್ನು ಮಾರಾಟ ಮಾಡಲು ನೈಸ್ ಕಂಪೆನಿಗೆ ಅಧಿಕಾರ ನೀಡಿರುವುದು. ಇದನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಅವರ ಪುತ್ರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರವಾಗಿ ವಿರೋಧಿಸುತ್ತಿದ್ದಾರೆ. ಹಾಗಾಗಿ ಈ ಸಂಬಂಧ ವಿವಾದದ ಹೇಳಿಕೆಗಳ ಭರಾಟೆ ಮುಂದುವರೆದಿತ್ತು.

ಒಪ್ಪಂದ ರದ್ದುಮಾಡುವ ಸಚಿವ ಸಂಪುಟದ ನಿರ್ಣಯಕ್ಕೆ ಅಮೆರಿಕಾ ಪ್ರವಾಸದಲ್ಲಿರುವ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಅವರು ಪ್ರತಿಕ್ರಿಯಿಸಿ ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲಿರುವುದಾಗಿ ಹೇಳಿದ್ದಾರೆ.
ಮತ್ತಷ್ಟು
ಸ್ಥಳೀಯ ಸಂಸ್ಥೆ ಚುನಾವಣೆ ಮೈತ್ರಿ ಇಲ್ಲ
ದಿ.ರಾಮಕೃಷ್ಣ ಹೆಗಡೆ ಜನ್ಮ ದಿನ ಆಚರಣೆ
ಚಲನಚಿತ್ರ ಪ್ರಶಸ್ತಿ ಪ್ರದಾನ ಇಂದು
ಮತ್ತೆ ಮರಳು ಲಾರಿ ಮುಷ್ಕರ
ಚಲನಚಿತ್ರ ಪ್ರಶಸ್ತಿ ಪ್ರದಾನ ಇಂದು
ಬೃಹತ್ ಉದ್ದಿಮೆಗಳಿಂದ ಹೆಚ್ಚಲಿರುವ ಸಮಸ್ಯೆಗಳು