ಕೇಂದ್ರದ ಆದೇಶದ ಹೊರತಾಗಿಯೂ, ಬೆಂಗಳೂರಿನಲ್ಲಿ ರಾಷ್ಟ್ರೀಯ ನಾಟಕ ಶಾಲೆ ಸ್ಥಾಪಿಸಲು ದೆಹಲಿಯ ಅಧಿಕಾರಿಗಳು ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಆರೋಪಿಸಿರುವ ರಂಗಕರ್ಮಿ ಪ್ರಸನ್ನ, ನವೆಂಬರ್ ಅಂತ್ಯದೊಳಗೆ ರಾಷ್ಟ್ರೀಯ ನಾಟಕ ಶಾಲೆ ಹಾಗೂ ತಜ್ಞರ ಸಮಿತಿ ರಚನೆ ನಡೆಯದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಕರ್ನಾಟಕ ಸೇರಿದಂತೆ ಐದು ರಾಜ್ಯಗಳಲ್ಲಿ ನಾಟಕ ಶಾಲೆ ಸ್ಥಾಪಿಸುವ ಬಗ್ಗೆ ಕೇಂದ್ರ ಸರಕಾರ ಪ್ರಕಟಣೆ ನೀಡಿತ್ತು. ಆದರೆ ಈ ಬಗ್ಗೆ ಅಧಿಕಾರಿಗಳು ಅಡ್ಡಿ ಮಾಡುತ್ತಿದ್ದಾರೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ನಾಟಕ ಶಾಲೆ ಸ್ಥಾಪನೆಗೆ ಎಲ್ಲಾ ಸಿದ್ಧತೆಗಳೂ ನಡೆದಿವೆ. ರಾಜ್ಯ ಸರಕಾರ ನಗರದಲ್ಲಿ ಇದಕ್ಕಾಗಿ ಜಾಗವನ್ನೂ ಗುರುತಿಸಿದೆ. ಕೇಂದ್ರ ಸರ್ಕಾರವೂ ಉತ್ತಮ ನೆರವು ನೀಡುತ್ತಿದೆ. ಆದರೆ ಕೇಂದ್ರದ ಆದೇಶ ಜಾರಿಯನ್ನು ತಡೆ ಹಿಡಿದಿರುವ ಅಧಿಕಾರಿಗಳು ಈ ಬಗ್ಗೆ ಕುಂಟು ನೆಪ ಹೇಳುತ್ತಿದ್ದಾರೆ ಎಂದು ಆರೋಪಿಸಿದರು.
|