ಅತ್ಯಾಚಾರ ಹಾಗೂ ಕೊಲೆ ಆರೋಪ ಹೊತ್ತಿರುವ ರೌಡಿ ಪ್ರವೀಣ್ ಶಿಂತ್ರೆನನ್ನು ಬಂಧಿಸುವಂತೆ ಒತ್ತಾಯಿಸಿ ಹಲವು ಮಹಿಳಾ ಸಂಘಟನೆಗಳು ಶುಕ್ರವಾರ ನೀಡಿದ್ದ ಬೆಳಗಾವಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಆರೋಪಿ ಹಾಗೂ ಆತನ ಸಹಚರರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದ್ದು, ಶಾಲಾ ಕಾಲೇಜುಗಳು ಬಂದ್ ಆಗಿದ್ದವು. ಬಸ್ ಸಂಚಾರವೂ ಸ್ಥಗಿತಗೊಂಡಿತ್ತು.
ಅತ್ಯಾಚಾರ ಹಾಗೂ ಕೊಲೆ ಆರೋಪಗಳನ್ನು ಖುದ್ದಾಗಿ ವಿಚಾರಣೆ ನಡೆಸಲು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನೇಸರ್ಗಿ ಬೆಳಗಾವಿಗೆ ಆಗಮಿಸಿದ್ದಾರೆ.
|