ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಸಿಎಂ ವಿರುದ್ಧ ಧರಂ ಗರಂ
ಕುಮಾರಸ್ವಾಮಿ ಮೇಲೆ ಕ್ರಿಮಿನಲ್ ಮೊಕದ್ದಮೆ ಎಚ್ಚರಿಕೆ
ತಾವು ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿನಿಧಿಸುತ್ತಿರುವ ವಿಧಾನಸಭಾ ಕ್ಷೇತ್ರಗಳಲ್ಲಿನ ಜನರು ಭಿಕ್ಷುಕರು ಎಂದು ಟೀಕಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಧರಂಸಿಂಗ್ ಎಚ್ಚರಿಸಿದ್ದಾರೆ.

ಒಬ್ಬ ಮುಖ್ಯಮಂತ್ರಿ ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಗುಲ್ಬರ್ಗಾದಲ್ಲಿ ಟೀಕಿಸಿದ ಅವರು, ಹಾಸನದಲ್ಲಿ ಹಾಗೂ ರಾಮನಗರದಲ್ಲಿ ಭಿಕ್ಷುಕರೇ ಇಲ್ಲವೇನು ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ಸಿನ ಪ್ರಭಾವಿ ಮುಖಂಡರ ಕ್ಷೇತ್ರಗಳಲ್ಲಿ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿರುವ ಮುಖ್ಯಮಂತ್ರಿಗಳು ಮಧ್ಯಂತರ ಚುನಾವಣೆಗೆ ಸಜ್ಜಾಗುತ್ತಿದ್ದಾರೆ ಎಂದು ಅವರು ಶಂಕೆ ವ್ಯಕ್ತಪಡಿಸಿದರು.
ಮತ್ತಷ್ಟು
ಬಾಲಕಿಯನ್ನೇ ಬಾವಿಗೆ ತಳ್ಳಿದ ಭೂಪ
ರೌಡಿ ಸೆರೆ ಒತ್ತಾಯಿಸಿ ಬೆಳಗಾವಿ ಬಂದ್
ರೆಡ್ಡಿ ಗಣಿ ಪರವಾನಗಿ: ಹೈಕೋರ್ಟ್ ರದ್ದು
ಶಾಸಕರ ವಿರುದ್ಧ ಲೋಕಾಯುಕ್ತ ಮೊಕದ್ದಮೆ
ತಾಯಿಯನ್ನು ಬೀದಿಗೆ ತಂದು ನಿಲ್ಲಿಸಿದ ಡಿಕೆಶಿ: ಸಿಎಂ
'ರಾಜಕೀಯ': ಅಜರುದ್ದೀನ್ ಮೌನ