ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಸ್ಥಳಿಯ ಸಂಸ್ಥೆಗಳಿಗೆ ಏಕಾಂಗಿ ಸ್ಪರ್ಧೆ: ಜೆಡಿ (ಎಸ್)
ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಹೆಚ್ಚುತ್ತಿದ್ದು, ಚುನಾವಣೆಯಲ್ಲಿ ಸಮ್ಮಿಶ್ರ ಸರ್ಕಾರದ ಮಿತ್ರಪಕ್ಷಗಳು ಪರಸ್ಪರ ವಿರುದ್ಧ ಸ್ಪಧಿಸುವುದು ಖಚಿತವಾಗಿದೆ.

ಈ ಚುನಾವಣೆಯಲ್ಲಿ ಬಿಜೆಪಿ ಸೇರಿದಂತೆ ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಳ್ಳದೆ ಏಕಾಂಗಿ ಹೋರಾಟಕ್ಕೆ ಪಕ್ಷ ಸಜ್ಜುಗೊಳ್ಳುತ್ರಿರುವುದಾಗಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಗೌಡರ ಈ ಹೇಳಿಕೆ ಮಿತ್ರ ಪಕ್ಷ ಜೆಡಿಎಸ್ ಜತೆ ಚುನಾವಣೆ ಎದುರಿಸಬೇಕು ಎಂಬ ಬಿಜೆಪಿ ಆಸೆಗೆ ತಣ್ಣೀರು ಎರಚಿದಂತಾಗಿದೆ. ಇತ್ತೀಚಿಗೆ ನಡೆದ ಬಿಜೆಪಿ ಸಭೆಯಲ್ಲಿ ಕಾಂಗ್ರೆಸ್ ಹಾಗೂ ಎಡಪಕ್ಷಗಳನ್ನು ಹೊರತುಪಡಿಸಿ ಇನ್ನುಳಿದ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ನಿರ್ಧಾರವನ್ನು ಆಯಾ ಸ್ಥಳೀಯ ಘಟಕಗಳಿಗೆ ಬಿಡಲಾಗಿದೆ ಎಂಬ ನಿರ್ಣಯ ಕೈಗೊಳ್ಳಲಾಗಿತ್ತು.

ಸ್ಥಳೀಯ ಸಮಸ್ಯೆಗಳನ್ನಾಧರಿಸಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಮ್ಮ ಪಕ್ಷದ ಜಿಲ್ಲಾ ಘಟಕಗಳು ಮೈತ್ರಿ ಕುರಿತು ಯೋಚಿಸಲಿವೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಸಮ್ಮಿಶ್ರ ಸರ್ಕಾರದ ಮೇಲೆ ಯಾವ ಪರಿಣಾಮವನ್ನೂ ಬೀರುವುದಿಲ್ಲ ಎಂದು ದೇವೇಗೌಡ ಹಾಗೂ ಕುಮಾರಸ್ವಾಮಿ ಹೇಳಿದ್ದಾರೆ.
ಮತ್ತಷ್ಟು
ಅಧಿಕಾರ ಹಸ್ತಾಂತರಕ್ಕೆ ಬದ್ದ: ಕುಮಾರಸ್ವಾಮಿ
ಅಪರೂಪಕ್ಕೆ ಕೆರೆ ಭರ್ತಿ
ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳ ನೇಮಕ
ಬಿ.ಎಸ್.ಯಡಿಯೂರಪ್ಪ ಕ್ಷೇತ್ರದಲ್ಲೇ ನಕಲಿ ಸಾರಾಯಿ ಮಾರಾಟ
ಆಸ್ತಿ ವಿವರ ಸಲ್ಲಿಸಿದ ಶಾಸಕರು
ವಿದ್ಯುತ್ ಘಟಕ ಸ್ಥಾಪನೆ: ಸರ್ಕಾರದ ಬಿಗಿಪಟ್ಟು