ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿ ಮಂಗಳವಾರ ರಾಜ್ಯ ಚುನಾವಣಾ ಅಯೋಗ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ.
ಎಲ್ಲ ರಾಜಕೀಯ ಪಕ್ಷಗಳು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನು ವಿರೋಧಿಸುತ್ತಿದ್ದರೂ ರಾಜ್ಯ ಚುನಾವಣಾ ಆಯೋಗದ ಬಿಗಿ ಪಟ್ಟಿನಿಂದಾಗಿ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ರಾಜಕೀಯ ಪಕ್ಷಗಳು ಚುನಾವಣೆ ಎದುರಿಸಲೇ ಬೇಕಾಗಿಬಂದಿದೆ.
ತಮ್ಮ ಪಕ್ಷಗಳನ್ನು ಸಂಘಟಿಸುವ ಕಾಯಕದಲ್ಲಿ ಪಕ್ಷಗಳ ಮುಖಂಡರು ನಿರತರಾಗಿದ್ದಾರೆ. ಸಮ್ಮಿಶ್ರ ಸರ್ಕಾರದ ದೋಸ್ತಿ ಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ ನಡುವೆ ಹೊಂದಾಣಿಕೆಯ ಮಾತು ಕೇಳಿ ಬರುತ್ತಿದ್ದರೂ ಅದು ಜಾರಿಯಾಗುವ ಲಕ್ಷಣಗಳು ಕಾಣುತ್ತಿಲ್ಲ.
ಕಾಂಗ್ರೆಸ್ ಪಕ್ಷದ ಮುಖಂಡರು ರಾಜ್ಯದಲ್ಲಿ ಪ್ರವಾಸ ಮಾಡಿ, ರಾಜ್ಯಸರಕಾರದ ವೈಫಲ್ಯಗಳ ವಿರುದ್ಧ ಹೋರಾಟ ನಡೆಸುವ ಮೂಲಕ ಮತದಾರರ ಗಮನ ಸೆಳೆಯಲು ಪ್ರಯತ್ನ ಆರಂಭಿಸಿದ್ದಾರೆ.
ಜೆಡಿಎಸ್ ಮುಖಂಡ ದೇವೇಗೌಡರು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮೆರಾಜುದ್ದೀನ್ ಪಟೇಲ್ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ. ತಾವೂ ಸಹಾ ರಾಜ್ಯ ಪ್ರವಾಸದಲ್ಲಿ ತೊಡಗಿ ಪಕ್ಷ ಬಲವರ್ಧನೆ ಕಾರ್ಯದಲ್ಲಿ ತೊಡಗಿದ್ದಾರೆ.
ಬಿಜೆಪಿ ಚುನಾವಣೆಗೆ ಸಜ್ಜಾಗಲು ಈಗಾಗಲೇ ಸಭೆ ನಡೆಸಿ ಎಲ್ಲ ತಯಾರಿ ಮಾಡಿಕೊಳ್ಳುತ್ತಿದೆ.
|