ಜೆಡಿಎಸ್ ಸಂಘಟನೆಗಾಗಿ ವರಿಷ್ಠ ನಾಯಕ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.
ಮಂಗಳವಾರ ಹುಬ್ಬಳ್ಳಿಯಲ್ಲಿ ಸಿದ್ಧಾರೂಢ ಮಠಕ್ಕೆ ಹಾಗೂ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಲು ತಾವು ಮೆರಾಜುದ್ದೀನ್ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂಬ ಆರೋಪವನ್ನು ನಿರಾಕರಿಸಿದರು.
ಈ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪುನರುಚ್ಚರಿಸಿದ ಅವರು, ಚುನಾವಣೆಗೆ ಸಂಬಂಧಿಸಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಂದ ಸಮಾನ ಅಂತರವನ್ನು ಕಾಯ್ದುಕೊಳ್ಳುವುದಾಗಿ ತಿಳಿಸಿದ್ದಾರೆ.
|