ದೇವೇಗೌಡ ಕುಟುಂಬದ ರಾಜಕೀಯ ವೈರಿ ಸಿದ್ಧರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಸನ್ನದ್ಧವಾಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರಕಾರ ಕುರುಬರ ಸಮುದಾಯಕ್ಕೆ ಕಿರುಕುಳ ನೀಡುತ್ತಿದೆ ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಆರೋಪಿಸಿದ್ದಾರೆ.
ಒಂದು ಅಪರಾಧ ಪ್ರಕರಣದ ಆರೋಪಿಗಳಿಗೆ ಸಚಿವರಾದ ಚೆಲುವರಾಯ ಸ್ವಾಮಿ ಹಾಗೂ ಚೆನ್ನಿಗಪ್ಪ ಅವರು ಆಶ್ರಯ ನೀಡಿದ್ದಾರೆ ಎಂದು ಗೃಹ ಸಚಿವ ಎಂ.ಪಿ.ಪ್ರಕಾಶ್ ಅವರಿಗೆ ದೂರು ನೀಡಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.
ಯಾರನ್ನೋ ಮಟ್ಟ ಹಾಕಲು ಅವರ ಸಮುದಾಯದ ವಿರುದ್ಧ ಸೇಡು ತೀರಿಸಿಕೊಳ್ಳಲು ಸರಕಾರ ಹೊರಟಿರುವುದು ನಾಚಿಕೆಗೇಡಿನ ಸಂಗತಿ ಎಂದು ವಿಶ್ವನಾಥ್ ಹೇಳಿದ್ದಾರೆ.
ಆದರೆ ಈ ಆರೋಪಗಳಿಗೆ ಸ್ಪಂದಿಸಿದ ಎಂ.ಪಿ.ಪ್ರಕಾಶ್, ಅವರು ಇದರ ಬಗ್ಗೆ ತಾವು ಡಿಜಿಪಿ ಜತೆ ಮಾತನಾಡುವುದಾಗಿ ತಿಳಿಸಿದ್ದಾರೆ.
|