ಹೈದರಾಬಾದ್ ಸ್ಪೋಟ ಪ್ರಕರಣದ ಆರೋಪಿ ಅಬ್ದುಲ್ ಕಲಾಂನನ್ನು ಬುಧವಾರವೂ ಸಹಾ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಸುಳ್ಳುಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ.
ಸೋಮವಾರ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಮತ್ತೊಬ್ಬ ಶಂಕಿತ ಉಗ್ರ ಸೈಯದ್ ಇಮ್ರಾನ್‌ನಿಗೆ ಮಂಪರು ಪರೀಕ್ಷೆಗೆ ಒಳಪಡಿಸಲಾಗಿತ್ತು. ತನ್ನ ಮನೆಯಲ್ಲಿ ಇನ್ನೂ ಆರ್ ಡಿಎಕ್ಸ್ ಹಾಗೂ ಬೇರೆ ಶಸ್ತ್ರಾಸ್ತ್ರ ಇಟ್ಟುಕೊಂಡಿರುವುದಾಗಿ ಹೇಳಿದ್ದಾನೆ.
ಈ ಹಿನ್ನೆಲೆಯಲ್ಲಿ ಮತ್ತಷ್ಟು ಮಹತ್ವದ ಮಾಹಿತಿ ಲಭಿಸಬಹುದೆಂಬ ನಿರೀಕ್ಷೆಯಲ್ಲಿ ಅಬ್ದುಲ್ ಕಲೀಂನನ್ನು ಮಂಪರು ಪರೀಕ್ಷೆಗೆ ಒಳಪಡಿಸಲಾಗಿದೆ. ಆ ಸಂದರ್ಭದಲ್ಲಿ ತನ್ನ ಜತೆ ಇನ್ನೂ ಮೂರು ಮಂದಿ ಸ್ಪೋಟದ ಸಂಚಿನಲ್ಲಿ ಭಾಗಿಯಾಗಿರುವುದಾಗಿ ಆತ ತಿಳಿಸಿದ್ದಾನೆ ಎಂದು ಹೇಳಲಾಗಿದೆ.
ಇನ್ನೂ ಶಂಕಿತ ಉಗ್ರರು ಹೈದರಾಬಾದ್ ನಗರದಲ್ಲಿ ಇರುವುದಾಗಿ ಮಾಹಿತಿ ತಿಳಿದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಮುಂದುವರೆದಿದೆ. ಹೈದರಾಬಾದ್ ಸ್ಪೋಟ ಪ್ರಕರಣದ ತನಿಖೆ ತಮಿಳುನಾಡಿಗೂ ವ್ಯಾಪಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
|