ಸಮ್ಮಿಶ್ರ ಸರ್ಕಾರದ ಅಧಿಕಾರ ಹಸ್ತಾಂತರದ ದಿನಾಂಕ ಹತ್ತಿರವಾಗುತ್ತಿದ್ದಂತೆ ಈಗಾಗಲೇ ಸೃಷ್ಟಿಯಾಗಿರುವ ಗೊಂದಲಗಳಿಗೆ ಮತ್ತೊಂದು ಗೊಂದಲ ಸೇರ್ಪಡೆಯಾಗಿದೆ.
ಉಪ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬುಧವಾರ ಭೇಟಿ ಮಾಡಿದ ಇಂಧನ ಸಚಿವ ಎಚ್.ಡಿ.ರೇವಣ್ಣ ಅವರು ಸಮಾಲೋಚನೆ ನಡೆಸಿದ್ದಾರೆ.
ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿ ಅವರೇ ಮುಂದುವರೆಯಬೇಕು ಅದರ ಬದಲಿಗೆ ಬಿಜೆಪಿಗೆ ಹೆಚ್ಚುವರಿ ಸಚಿವ ಸ್ಥಾನ ನೀಡಲು ಜೆಡಿಎಸ್ ಕಡೆಯಿಂದ ರೇವಣ್ಣ ಅವರು ಆಮಿಷ ನೀಡಿದ್ದಾರೆ ಎಂದು ಹೇಳಲಾಗಿದೆ.
ಆದರೆ ತಾವು ಇಲಾಖೆಯ ವಿಷಯವಾಗಿ ತಾವು ಉಪ ಮುಖ್ಯಮಂತ್ರಿ ಅವರ ಜತೆ ಚರ್ಚೆ ನಡೆಸಿರುವುದಾಗಿ ಅವರು ತಿಳಿಸಿದ್ದಾರೆ. ಇದಕ್ಕೆ ವಿಶೇಷ ರಾಜಕೀಯ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ಹೇಳಿದ್ದಾರೆ.
ಬಿ.ಎಸ್. ಯಡಿಯೂರಪ್ಪ ಅವರೂ ಸಹಾ ಯಾವುದೇ ರಾಜಕೀಯವಿಷಯದ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಉಭಯ ಮುಖಂಡರ ಭೇಟಿ ರಾಜಕೀಯ ಕುತೂಹಲ ಕೆರಳಿಸಿದೆ.
|