ಬಿಜೆಪಿಗೆ ಅಧಿಕಾರ ಹಸ್ತಾಂತರ ವಿಷಯದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ ಅವರು ದಿನಕ್ಕೊಂದು ಹೇಳಿಕೆ ನೀಡಿ ಗೊಂದಲ ಹುಟ್ಟಿಸುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತೊಂದು ಹೇಳಿಕೆ ನೀಡಿದ್ದಾರೆ.
ದೇವೆಗೌಡರ ಮನವೊಲಿಸಿ ಬಿಜೆಪಿಗೆ ಅಧಿಕಾರವನ್ನು ಹಸ್ತಾಂತರಿಸಲಾಗುವುದು ಕೊಟ್ಟ ಮಾತಿಗೆ ತಪ್ಪುವುದಿಲ್ಲ ಎಂದು ಬೆಂಗಳೂರಿನಲ್ಲಿ ಹೇಳಿದ್ದಾರೆ. ಇದರಿಂದ ಬಿಜೆಪಿ ಮುಖಂಡರು ನೆಮ್ಮದಿಯಾಗಿ ನಿಟ್ಟುಸಿರು ಬಿಡುತ್ತಿದ್ದಾರೆ.
ಇದೇ ಸಮಯದಲ್ಲಿ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಟೀಕೆಗಳಿಗೆ ಉತ್ತರ ನೀಡಿದ ಅವರು ಸಿದ್ದರಾಮಯ್ಯ ಅವರ ವರ್ತನೆ ಪಾಳೇಗಾರಿಕೆಯದ್ದು ಎಂದು ಖಾರವಾಗಿ ನುಡಿದಿದ್ದಾರೆ.
|