ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ರಾಜ್ಯಪಾಲ ರಾಮೇಶ್ವರ್ ಠಾಕೂರ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಅಧಿಕಾರ ಹಸ್ತಾಂತರದ ದಿನಾಂಕ ಸಮೀಪಿಸುತ್ತಿದ್ದಂತೆ ಮುಖ್ಯಮಂತ್ರಿ ಅವರು ರಾಜ್ಯಪಾಲರನ್ನು ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಈ ಭೇಟಿಯಲ್ಲಿ ವಿಶೇಷವೇನೂ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಮುಖ್ಯಮಂತ್ರಿಗಳು ಹಮ್ಮಿಕೊಳ್ಳುತ್ರಿರುವ ಗ್ರಾಮವಾಸ್ತವ್ಯ ಕಾರ್ಯಕ್ರಮಗಳ ಬಗ್ಗೆ ರಾಜ್ಯಪಾಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
|