ಸ್ವಾತಂತ್ರ್ಯ ಬೆಳ್ಳಿ ಚುಕ್ಕಿ ವೀರ ರಾಣಿ ಕಿತ್ತೂರು ಚೆನ್ನಮ್ಮಳ ಪುತ್ಥಳಿಯ ಅನಾವರಣ ಸಂಸತ್ತಿನ ಆವರಣದಲ್ಲಿ, ರಾಷ್ಟ್ರಾಧ್ಯಕ್ಷೆ ಪ್ರತಿಭಾ ದೇವಿ ಪಾಟೀಲ್ ಶೇಖಾವತ್ ಅವರಿಂದ ಬರುವ ಸೆಪ್ಟಂಬರ್ 10 ರಂದು ಜರುಗಲಿದೆ.
ಮುಖ್ಯಮಂತ್ರಿಗಳ ಕಾರ್ಯದರ್ಶಿಗಳು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸೆಪ್ಟಂಬರ್ 9 ರಂದು ನವದೆಹಲಿಗೆ ತೆರಳಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ಬಾಕಿ ಇರುವ ರಾಜ್ಯದ ಯೋಜನೆಗಳ ಕುರಿತಂತೆ ಕೇಂದ್ರ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
|