ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಮಹಿಳಾ ದೌರ್ಜನ್ಯ: ವಿಶೇಷ ನ್ಯಾಯಾಲಯ ಸ್ಥಾಪನೆ ಚಿಂತನೆ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಶೀಘ್ರ ವಿಲೇವಾರಿಗೆ ಜಿಲ್ಲಾ ಮಟ್ಟದಲ್ಲಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಈ ಸಂಬಂಧ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರಿಗೆ ಪತ್ರ ಬರೆಯುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಎಚ್.ಕೆ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಇತ್ತೀಚೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಿತ್ತಿವೆ. ಶಾಲಾ-ಕಾಲೇಜು ವಿದ್ಯಾರ್ಥಿನಿಯರು ಹಾಗೂ ಅಂಗನವಾಡಿ ಸಹಾಯಕಿಯರ ಮೇಲೆ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ವರ್ಷ ರಾಜ್ಯದಲ್ಲಿ 760 ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 135 ಅತ್ಯಾಚಾರ ಪ್ರಕರಣಗಳಾಗಿವೆ. ಈ ಎಲ್ಲ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ. ಇವುಗಳ ಶೀಘ್ರ ವಿಲೇವಾರಿಗೆ ವಿಶೇಷ ನ್ಯಾಯಾಲಯ ಸ್ಥಾಪಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.
ಮತ್ತಷ್ಟು
ಬಿಎಸ್ಪಿಯತ್ತ ಸಿಂಧ್ಯ ಚಿತ್ತ: ಜೆಡಿಎಸ್‌ನಿಂದ ಖೊಕ್ ಸಾಧ್ಯತೆ
ಮಾತಿಗೆ ಬದ್ಧ : ಕುಮಾರಸ್ವಾಮಿ ಸ್ಪಷ್ಟನೆ
ಚಿತ್ರದುರ್ಗ, ಭಟ್ಕಳದಲ್ಲಿ ಅಪಘಾತ: 13 ಬಲಿ
ಮಧ್ಯಂತರ ಚುನಾವಣೆ: ಮಿತ್ರ ಪಕ್ಷಗಳ ಭಿನ್ನ ಮುಖ
ಪ್ರತಿಭಾರಿಂದ ಚೆನ್ನಮ್ಮಳ ಪುತ್ಥಳಿ ಅನಾವರಣ
ಕೆಎಸ್ಸಿಎ ಚುನಾವಣೆ: ಒಡೆಯರ್ ಬಣ ಮೇಲುಗೈ