ಬೆಂಗಳೂರು ಹಾಗೂ ಸುತ್ತಮುತ್ತಲಿನ ಸರ್ಕಾರಿ ಭೂಮಿಯ ಒತ್ತುವರಿ ಪ್ರಕರಣಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿರುವ ಕೆ.ಟಿ.ರಾಮಸ್ವಾಮಿ ನೇತೃತ್ವದ ಜಂಟಿ ಸದನ ಸಮಿತಿ, ಆನೇಕಲ್ ತಾಲೂಕಿನಲ್ಲಿ ಮಂಗಳವಾರ ಪರೀಶೀಲನೆ ನಡೆಸಿದೆ.
ಸುಮಾರು 3 ಕೋಟಿ ರೂ. ಮೌಲ್ಯದ ಸರ್ಕಾರದ ಭೂಮಿಯನ್ನು ಖಾಸಗಿ ಸಂಸ್ಥೆಯೊಂದು ಒತ್ತುವರಿ ಮಾಡಿಕೊಂಡಿರುವುದನ್ನು ಪತ್ತೆ ಹಚ್ಚಿದೆ.
ಮತ್ತೊಂದು ಕಡೆ 1.2 ಎಕರೆ ಸರ್ಕಾರಿ ಒತ್ತುವರಿ ಪ್ರಕರಣವನ್ನು ಪತ್ತೆಹಚ್ಚಲಾಗಿದ್ದು, ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ರಾಮಸ್ವಾಮಿ ತಿಳಿಸಿದ್ದಾರೆ.
|