ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿಯ ಅನಾವರಣ ಕಾಯಕ್ರಮದಲ್ಲಿ ಪಾಲ್ಗೊಂಡು ದೆಹಲಿಯಲ್ಲೇ ಉಳಿದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಅವರ ಜತೆ ಮಾತುಕತೆ ನಡೆಸಿದ್ದಾರೆ.
ರಾಜ್ಯದಲ್ಲಿ ಅತಿವೃಷ್ಟಿಯಿಂದ ಬೆಳೆಗೆ ಆಗಿರುವ ನಷ್ಟವನ್ನು ವಿವರಿಸಿದ ಅವರು ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ಸಂಕಷ್ಟ ಹಾಗು ಅವರ ಆತ್ಮಹತ್ಯೆ ಕುರಿತು ಸುದೀರ್ಘವಾಗಿ ಚರ್ಚಿಸಿದ್ದಾರೆ.
|