ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗುತ್ತಿರುವ ಬಿಜೆಪಿ ಗುರುವಾರ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ. ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಲು ಪಕ್ಷ ನಿರ್ಧರಿಸಿದೆ.
ಗುರುವಾರ ಬೆಳಗಾವಿಯಲ್ಲಿ ನಡೆಯಲಿರುವ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಸಂಸದ ಅನಂತಕುಮಾರ್, ಉಪ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸಲಿದ್ದಾರೆ.
ತಮಗೆ ಅಧಿಕಾರ ಹಸ್ತಾಂತರದ ಬಗ್ಗೆ ಪೂರ್ಣ ವಿಶ್ವಾಸವಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಸದಾನಂದಗೌಡ ಹೇಳಿದ್ದಾರೆ.
|