ಹೈದರಾಬಾದ್ ಸ್ಪೋಟ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಸೈಯದ್ ಇಮ್ರಾನ್‌ಗೆ ಬುಧವಾರ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಮತ್ತೊಮ್ಮೆ ಮಂಪರು ಪರೀಕ್ಷೆ ನಡೆಸಲಾಗುತ್ತಿದೆ.
ಈಗಾಗಲೇ ಎರಡು ಬಾರಿ ಆತನನ್ನು ಮಂಪರು ಪರೀಕ್ಷೆಗೆ ಗುರಿಪಡಿಸಲಾಗಿತ್ತು. ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಯಾಗಿರುವ ಶೇಕ್ ಅಬ್ದುಲ್ ಖಲೀಂನನ್ನು ಗುರುವಾರ ಮಂಪರು ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
|