ರೈತರ ಆತ್ಮಹತ್ಯೆಗಳ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪ್ರಕಟಿಸಿರುವ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆಯಾ ಇಲಾಖೆಗಳು ಸಮೀಕ್ಷೆ ನಡೆಸುವಂತೆ ಸರ್ಕಾರಕ್ಕೆ ಸಚಿವ ಸಂಪುಟದ ಉಪ ಸಮಿತಿ ಶಿಫಾರಸು ನೀಡಲಿದೆ.
ಉಪ ಸಮಿತಿಯ ಅಧ್ಯಕ್ಷ ಹಾಗೂ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಗುರುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ನೀರಾವರಿ ಯೋಜನೆಗಳಿಗಾಗಿ ಮೀಸಲಿಟ್ಟಿರುವ 1200 ಕೊಟಿ ರೂ. ಹಣವನ್ನು ವಿವಾದವಿಲ್ಲದ ನೀರಾವರಿ ಯೋಜನೆಗಳಿಗೆ ವೆಚ್ಚ ಮಾಡುವಂತೆ ಶಿಫಾರಸು ಮಾಡಲಾಗುವುದು ಎಂದರು.
ಸಣ್ಣ ನೀರಾವರಿ ಯೋಜನೆಗಳಿಗೆ 550 ಕೊಟಿ ರೂ.ಗಳನ್ನು ನಬಾರ್ಡ್ ಮಂಜೂರು ಮಾಡಿರುವುದಾಗಿ ಅವರು ತಿಳಿಸಿದರು. ಸಂಪೂರ್ಣ ಗ್ರಾಮೀಣ ಪ್ರದೇಶದ ನೀರಾವರಿ ಯೋಜನೆಗಳಿಗೆ ಮಾತ್ರ ಈ ಹಣವನ್ನು ವೆಚ್ಚ ಮಾಡಬೇಕಾಗಿದ್ದು, ಸದ್ಯದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು.
|