ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿವೆ. ಇತ್ತೀಚಿಗೆ ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು. ಸಮ್ಮಿಶ್ರ ಸರ್ಕಾರದ ಅಂಗಪಕ್ಷವಾದ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆಯಲ್ಲೂ ಹೊಸ ವಿಧಾನವನ್ನು ಅನುಸರಿಸುತ್ತಿದೆ.
ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೇರೆ ಬೇರೆ ಸಮಸ್ಯೆಗಳನ್ನು ಪರಿಗಣಿಸಿ ಅದರಂತೆ ಬೇರೇ ಪ್ರಣಾಳಿಕೆಯನ್ನು ರೂಪಿಸುತ್ತಿದೆ. ಕುಡಿಯುವ ನೀರು ಸರಬರಾಜು, ಚರಂಡಿ, ರಸ್ತೆ ಮುಂತಾದ ಅಂಶಗಳಿಗೆ ಸಂಬಂಧಿಸಿ ಪ್ರಣಾಳಿಕೆಯಲ್ಲಿ ಭರವಸೆಗಳನ್ನು ನೀಡುತ್ತಿದೆ.
ರಾಜ್ಯಾದ್ಯಂತ ಪಕ್ಷದ ಶಾಸಕರು ಪ್ರವಾಸ ಮಾಡಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವಂತೆ ನಿರ್ದೇಶನ ನೀಡಿದೆ.
ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಸೀಟು ಜಯಗಳಿಸುವಂತೆ ಕಾರ್ಯಕರ್ತರು ಹಾಗೂ ಮುಖಂಡರು ಶ್ರಮಿಸಬೇಕು ಎಂದು ಪಕ್ಷದ ರಾಜ್ಯಾಧ್ಯಕ್ಷ ಸದಾನಂದಗೌಡ ಆದೇಶ ನೀಡಿದ್ದಾರೆ.
|