ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಾರ್ಥನಹಳ್ಳಿ ಬಳಿ ಬಾವಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ಸೊಂದು ಉರುಳಿಬಿದ್ದು, 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಬಸ್ಸಿನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ.
ಈಗಾಗಲೇ ಐದು ಶವಗಳನ್ನು ಹೊರತೆಗೆಯಲಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ಅಪಘಾತ ಸ್ಥಳಕ್ಕೆ ಸಂಬಂಧಿತ ಅಧಿಕಾರಿಗಳು ರಕ್ಷಣಾ ಕಾರ್ಯಕ್ಕೆ ಧಾವಿಸಿ ಬಂದಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಕ್ಷಣಾ ಕಾರ್ಯ ನೀರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ ಎಂದು ದೂರಿದ್ದಾರೆ. ಶಿಳ್ಳೇಗಾವಿಯಿಂದ ಅಥಣಿಗೆ ಬಸ್ ತೆರಳುತ್ತಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರು ಎಂದು ಹೇಳಲಾಗಿದೆ.
|