ಬಿಜೆಪಿಗೆ ಅಧಿಕಾರ ಹಸ್ತಾಂತರ ಕುರಿತ ಸಾಧಕ ಬಾಧಕಗಳನ್ನು ಪರಾಮರ್ಶಿಸಿದ ನಂತರವಷ್ಟೇ ಅಂತಿಮ ನಿರ್ಧಾರ ತಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ತಿಳಿಸಿದ್ದಾರೆ.
ತಾವು ಅಧಿಕಾರ ಹಸ್ತಾಂತರಕ್ಕೆ ಕಟ್ಟುಬಿದ್ದಿದ್ದರೂ ಪಕ್ಷ ಅದರ ಬಗ್ಗೆ ಚರ್ಚೆಮಾಡಿ ಸೂಕ್ತ ನಿರ್ಧಾರ ತಗೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ.
ಹಾಸನ ಜಿಲ್ಲೆಯ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹುಟ್ಟೂರಾದ ಹರದನಹಳ್ಳಿಯಲ್ಲಿ ಹಲವಾರು ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು
|