ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ
ಬೆಂಗಳೂರುನಲ್ಲಿ ತನ್ನ ಆರ್ಭಟದಿಂದ ಜನಜೀವನ ಅಸ್ತವ್ಯಸ್ತ ಮಾಡಿದ ವರುಣದೇವ ಈಗ ಉತ್ತರ ಕರ್ನಾಟಕದಲ್ಲಿ ತನ್ನ ಪ್ರತಾಪ ತೋರಿಸುತ್ತಿದ್ದಾನೆ.

ಗುಲ್ಬರ್ಗಾ, ಧಾರವಾಡ, ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ಬಾಗಲಕೋಟೆಯಲ್ಲಿ ಮಳೆಯಿಂದ ಜನರು ಸಂಕಷ್ಟಕ್ಕೆ ಈಡಾಗಿದ್ದಾರೆ.

ಬಾಗಲಕೋಟೆಯಲ್ಲಿ ಭಾನುವಾರ ಸುರಿದ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಧಾರವಾಡದ ಅಣ್ಣಗೇರಿ ಪಟ್ಟಣದ ಜನತಾ ಬ್ಲಾಕ್, ಅಂಬಿಕಾನಗರ ಹಾಗೂ ಹರಿಜನಕೇರಿಯಲ್ಲಿ ಮಳೆಗೆ 65 ಮನೆಗಳು ಕುಸಿದಿವೆ.

ಕೊಪ್ಪಳ ಹೆದ್ದಾರಿ ನೀರಿನಲ್ಲಿ ಮುಳುಗಿರುವುದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ರಾಜ್ಯದ ಅನೇಕ ಭಾಗಗಳಲ್ಲಿ ಮುಂದಿನ ಎರಡು ದಿನಗಳು ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಪ್ರದೇಶದ ಬಹುತೇಕ ಭಾಗಗಳಲ್ಲಿ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಅನೇಕ ಪ್ರದೇಶಗಳಲ್ಲಿ ಮಳೆ ಯಾಗಲಿದೆ.
ಮತ್ತಷ್ಟು
ಕಲಾವಿದರ ಹುಟ್ಟುಹಬ್ಬದ ಸಂಭ್ರಮ
ಮಹತ್ವದ ಜೆಡಿಎಸ್ ಸಭೆ
ಸಿಎಂ ರಾಜೀನಾಮೆ ವದಂತಿ ?
ಸಾಂಕ್ರಾಮಿಕ ರೋಗಗಳ ತಡೆಗೆ ಸಿಬ್ಬಂದಿ ನೇಮಕ
ಮೈಸೂರಿಗೆ ಹೈಟೆಕ್ ಬಸ್‌
ಷರತ್ತನ್ನು ಉಲ್ಲಂಘಿಸಿದ ಮಿತ್ರಪಕ್ಷಗಳು