ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಬುಧವಾರ ಪಕ್ಷದ ಶಾಸಕರ ಹಾಗೂ ಸಚಿವರೆ ಸಭೆ ನಡೆದಿದೆ. ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.
ಎಲ್ಲ ಜಿಲ್ಲೆಗಳಿಗೆ ಚುನಾವಣೆಗೆ ಸಂಬಂಧಿಸಿದಂತೆ ಸಚಿವರನ್ನು ಉಸ್ತುವಾರಿಯಾಗಿ ನೇಮಿಸಿದ್ದು, ಎಲ್ಲ ಕಾರ್ಯಕರ್ತರು ಹಾಗೂ ಮುಖಂಡರು ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ದೇವೇಗೌಡರು ತಾಕೀತು ಮಾಡಿದ್ದಾರೆ.
ಜೆಡಿಎಸ್ ಚುನಾವಣಾ ಪ್ರಣಾಳಿಕೆ ಇದೇ ಶುಕ್ರವಾರ ಬಿಡುಗಡೆಯಾಗಲಿದೆ.
|