ಉತ್ತರ ಕರ್ನಾಟಕದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, 7 ಜನರು ಸಾವನ್ನಪ್ಪಿದ್ದಾರೆ. ಸಾವಿರಾರು ಮನೆಗಳು ಕುಸಿದಿವೆ. ಧಾರವಾಡ, ಕೊಪ್ಪಳ, ಬಳ್ಳಾರಿ ಮುಂತಾದ ಜಿಲ್ಲೆಗಳಲ್ಲಿ ಮಳೆ ಪ್ರವಾಹದಿಂದ ಸಾವಿರಾರು ಎಕರೆಗಳಲ್ಲಿರುವ ಬೆಳೆ ನಾಶವಾಗಿದೆ.
ನರಗುಂದ- ಹುಬ್ಬಳ್ಳಿ ಹೆದ್ದಾರಿ ಹಾಗೂ ನರಗುಂದ ಕೊಪ್ಪಳ ಹೆದ್ದಾರಿ ಕೊಚ್ಚಿಹೋಗಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸಂತ್ರಸ್ತರ ರಕ್ಷಣೆಗಾಗಿ ನರಗುಂದದಲ್ಲಿ ಹೆಲಿಕಾಪ್ಟರ್‌ಗಳನ್ನು ಬಳಸಲಾಗುತ್ತಿದೆ. ಅಗತ್ಯವಿದ್ದರೆ ಇನ್ನೆರಡು ಹೆಲಿಕಾಪ್ಟರ್‌ಗಳನ್ನು ಸರ್ಕಾರ ಒದಗಿಸಲಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.
|